Home ರಾಜಕೀಯ ಸಮಾಚಾರ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

1
0

ನವದೆಹಲಿ: ವಿದ್ಯಾರ್ಥಿಗಳ ನಿರಂತರ ಹೋರಾಟಕ್ಕೆ ಕೇಂದ್ರ‌ಸರಕಾರ‌ಮಣಿದಿದ್ದು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಧಾನ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ದೇಶದ ಯುವ ಜನತೆಯನ್ನು ಉದ್ದೇಶಿಸಿ ಧರ್ಮೇಂದ್ರ ಪ್ರಧಾನ್ ಸುದೀರ್ಘ ಪತ್ರ ಬರೆದಿದ್ದಾರೆ

ನಾಲ್ಕು ದಶಕಗಳಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಣ ಸುಧಾರಣೆಗಾಗಿ ಶ್ರಮಿಸಿದ್ದು, ದೇಶದ ಯುವಜನರ ಆಕಾಂಕ್ಷೆಗಳಿಗೆ ಸದಾ ಗೌರವ ಸಲ್ಲಿಸುತ್ತೇನೆ ಎಂದು ಹೇಳಿರುವ ಪ್ರಧಾನ್, ದೇಶಸೇವೆಗೆ ಅವಕಾಶ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಕ್ರೋಚ್ ಜನತಾ ಪಾರ್ಟಿ ದೆಹಲಿಯ ಜಂತರ್ ಮಂತರ್ ನಲ್ಲಿ ಸುಧೀರ್ಘ ಪ್ರತಿಭಟನೆಯ ಮೂಲಕ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿದ್ದರು.

LEAVE A REPLY

Please enter your comment!
Please enter your name here