Home ರಾಜಕೀಯ ಸಮಾಚಾರ ಜುಲೈ 27, 28ರಂದು ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್...

ಜುಲೈ 27, 28ರಂದು ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ: ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ ಲಾಯಿಲ

2
0

ಬೆಳ್ತಂಗಡಿ;  ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಮಹತ್ವಕಾಂಕ್ಷಿ ಯೋಜನೆಯಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ “ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ” ಕಾರ್ಯವು ಮನೆ ಮನೆಗೆ ಭೇಟಿ ನೀಡುವುದರ ಮೂಲಕ ನಡೆಯುತ್ತಿದ್ದು, ಬೆಳ್ತಂಗಡಿ ತಾಲೂಕು ವ್ಯಾಪ್ತಿಯಲ್ಲಿ ಹಲವಾರು ಕಡೆಗಳಲ್ಲಿ ಮೊಬೈಲ್ ನೆಟ್‌ವರ್ಕ್ ಇಲ್ಲದೇ, ಸಮಸ್ಯೆಯಾಗಿರುತ್ತದೆ, ಈ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ಹೆಚ್ಚುವರಿ ಮಾಹಿತಿ ಸಂಗ್ರಹಿಸುವ ಕಾರ್ಯವನ್ನು ಹಮ್ಮಿಕೊಳ್ಳಲು ಜುಲೈ 23ರಂದು ಬೆಳ್ತಂಗಡಿ ತಾಲೂಕಿನ ಪಂಚ ಗ್ಯಾರಂಟಿ ಸಮೀತಿ ಅಧ್ಯಕ್ಷ ರಾದ ಪದ್ಮನಾಭ ಸಾಲಿಯಾನ್ ಅವರ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಪಂಚಗ್ಯಾರಂಟಿ ಸಮಿತಿ ಸಭೆಯಲ್ಲಿ ನಿರ್ಣಯಿಸಲಾಗಿರುತ್ತದೆ. ಅದರಂತೆ ಜುಲೈ 27 ಹಾಗೂ 28 ರಂದು ನಿಗದಿಪಡಿಸಿದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ “ಗೃಹಜ್ಯೋತಿ ಫಲಾನುಭವಿಗಳ ಹೆಚ್ಚುವರಿ ಮಾಹಿತಿ ಸಂಗ್ರಹಣೆ” ಕಾರ್ಯವು ಜರುಗಲಿದೆ. ಸಂಬಂಧಪಟ್ಟ ಗ್ರಾಮ ಪಂಚಾಯತ್‌ಗಳು, ಮೆಸ್ಕಾಂ ಇಲಾಖೆಗೆ ಪೂರ್ಣ ಸಹಕಾರದೊಂದಿಗೆ ದಿನಾಂಕ: 27-07-2026 ನೇ ಸೋಮವಾರ
ಲಾಯಿಲ, ಬಂದಾರು, ಪಡಂಗಡಿ, ಕಾಶಿಪಟ್ಣ, ಬಳಂಜ, ಪುದುವೆಟ್ಟು, ಕೊಕ್ಕಡ, ಮುಂಡಾಜೆ ಗ್ರಾಮ ಪಂಚಾಯತ್ ನಲ್ಲಿ ಮತ್ತು 28-07-2026 ನೇ ಮಂಗಳವಾರ
ಅಂಡಿಂಜೆ, ಮರೋಡಿ,ಕಣಿಯೂರು,ಕಳಿಯ, ಮಡಂತ್ಯಾರು, ನಿಡ್ಲೆ,ಅರಸಿನಮಕ್ಕಿ, ಮಲವಂತಿಗೆ, ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯ ವರಗೆ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳಬೇಕೆಂದು ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ಲಾಯಿಲ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here