Home ಅಪಘಾತ ಉಜಿರೆ-ಕನ್ಯಾಡಿ ರಸ್ತೆಯಲ್ಲಿ ಅಪಘಾತ: ಸ್ಕೂಟರ್‌ ಗೆ ಡಿಕ್ಕಿ ಹೊಡೆದು ಅಪರಿಚಿತ ವಾಹನ ಪರಾರಿ

ಉಜಿರೆ-ಕನ್ಯಾಡಿ ರಸ್ತೆಯಲ್ಲಿ ಅಪಘಾತ: ಸ್ಕೂಟರ್‌ ಗೆ ಡಿಕ್ಕಿ ಹೊಡೆದು ಅಪರಿಚಿತ ವಾಹನ ಪರಾರಿ

0

ಬೆಳ್ತಂಗಡಿ: ಉಜಿರೆ-ಕನ್ಯಾಡಿ ರಸ್ತೆಯಲ್ಲಿ ಗುರುವಾರ ನಡೆದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರರೊಬ್ಬರು ಗಾಯಗೊಂಡ ಘಟನೆ ನಡೆದಿದೆ.

ಅಪರಿಚಿತ ವಾಹನವು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿದೆ ಎಂದು ತಿಳಿದುಬಂದಿದೆ.

ಅಪಘಾತದಲ್ಲಿ ಗಾಯಗೊಂಡ ಸ್ಕೂಟರ್ ಸವಾರರನ್ನು ಕಲ್ಮಂಜ ಗ್ರಾಮದ ನಿಡಿಗಲ್ ನಿವಾಸಿ ಬಾಲಕೃಷ್ಣ (32) ಎಂದು ಗುರುತಿಸಲಾಗಿದೆ. ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತಕ್ಕೆ ಕಾರಣವಾದ ವಾಹನದ ಪತ್ತೆಗೆ ಕ್ರಮ ಕೈಗೊಳ್ಳಲಾಗಿದ್ದು, ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version