Home ಅಪರಾಧ ಲೋಕ ಪಣಂಬೂರು ಬೀಚ್ ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಕಾರಾಗೃಹ...

ಪಣಂಬೂರು ಬೀಚ್ ನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ನಾಲ್ವರು ಆರೋಪಿಗಳಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ ನ್ಯಾಯಾಲಯ

6
0

ಮಂಗಳೂರು; ಸ್ನೇಹಿತನೊಂದಿಗೆ ಯುವಯೊಬ್ಬಳು ತೋಟ ಬೆಂಗ್ರೆ ಬೀಚ್ಗೆ ತೆರಳಿ ಕುಳಿತು ಮಾತನಾಡುತ್ತಿದ್ದ ವೇಳೆ, ಏಳು ಮಂದಿ ಅಪರಿಚಿತರು ಬಂದು ಯುವತಿಯ ಸ್ನೇಹಿತನನ್ನು ಎಳೆದುಕೊಂಡು ಹೋಗಿ ಹಲ್ಲೆ ನಡೆಸಿ, ಯುವತಿಯ ಮೇಲೆ ಬಲವಂತವಾಗಿ ಸಾಮೂಹಿಕ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ್ದ ಪ್ರಕರರಣದಲ್ಲಿ ನಾಲ್ವರು ಆರೋಪಿಗಳಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಘಟನೆಯ ವಿವರ;
2918 ರಲ್ಲಿ ಯುವತಿ ತನ್ನ ಸ್ನೇಹಿತನೊಂದಿಗೆ ಬೀಚ್ ಗೆ ಹೋಗಿದ್ದ ವೇಳೆ ಸಾಮೂಹಿಕ ಅತ್ಯಾಚಾರ ನಡೆದಿದ್ದು ಘಟನೆಯಿಂದ ಭಯಗೊಂಡ ಯುವತಿ ಯಾರಿಗೂ ವಿಷಯ ತಿಳಿಸದೆ ಇದ್ದರು. ಎರಡು ದಿನಗಳ ಬಳಿಕ ಆರೋಪಿತರು ದೂರವಾಣಿ ಕರೆ ಮಾಡಿ ಮತ್ತೆ ಬರಲು ಸೂಚಿಸಿದಾಗ, ಯುವತಿಯು ಮನೆಯವರಿಗೆ ವಿಷಯ ತಿಳಿಸಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಸಂಬಂಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 60/2018 ರಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 376(ಡಿ), 323, 354, 506 ಐಪಿಸಿ ಹಾಗೂ ಕಲಂ 3(1)(w)(i), 3(2)(v)(va) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಪ್ರಕರಣದಲ್ಲಿ ಒಟ್ಟು ಏಳು ಮಂದಿ ಆರೋಪಿಗಳಿದ್ದು, ಅವರ ಪೈಕಿ ಮೂವರು ಕಾನೂನು ಸಂಘರ್ಷಕ್ಕೊಳಗಾದ ಬಾಲಕರಾಗಿದ್ದರು. ಉಳಿದ ಆರೋಪಿತರಾದ ಪ್ರಜ್ವಲ್ @ ಪಜ್ಜು, ಅರುಣ್ ಅಮೀನ್ @ ಅರುಣ್ ಎಸ್., ಆದಿತ್ಯ ಸಾಲಿಯಾನ್ @ ಆದಿತ್ಯ ಹಾಗೂ ಅಬ್ದುಲ್ ರಿಯಾಝ್ @ ರಿಯಾಝ್ ಅವರನ್ನು ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಬಾಲಕರನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗಿತ್ತು.

ಪ್ರಕರಣದ ಪ್ರಾಥಮಿಕ ತನಿಖೆಯನ್ನು ಅಂದಿನ ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾಗಿದ್ದ ಶ್ರೀಮತಿ ಕಲಾವತಿ ಅವರು ಕೈಗೊಂಡಿದ್ದರು. ನಂತರ ಅಂದಿನ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾಗಿದ್ದ ಮಂಜುನಾಥ ಶೆಟ್ಟಿ ಅವರು ತನಿಖೆಯನ್ನು ಮುಂದುವರಿಸಿದ್ದರು. ಬಳಿಕ ಶ್ರೀನಿವಾಸ ಗೌಡ, ಐಪಿಎಸ್ ಅವರು ಪ್ರಕರಣದ ಸಮಗ್ರ ತನಿಖೆ ನಡೆಸಿ ಅಗತ್ಯ ಸಾಕ್ಷ್ಯಾಧಾರಗಳು ಹಾಗೂ ದಾಖಲೆಗಳನ್ನು ಸಂಗ್ರಹಿಸಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪತ್ರವನ್ನು ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣವು ಸ್ಪೆಷಲ್ ಕೇಸ್ ನಂ. 31/2019 ರಂತೆ ವಿಚಾರಣೆಗೆ ಒಳಪಟ್ಟಿದ್ದು, ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಜ್ಯೋತಿ ಪ್ರಮೋದ ನಾಯಕ್ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು. ದಿನಾಂಕ 27-07-2026 ರಂದು ಮಾನ್ಯ ನ್ಯಾಯಾಲಯವು ಸಾಕ್ಷ್ಯಾಧಾರಗಳು ಹಾಗೂ ಸಾಕ್ಷಿದಾರರ ಹೇಳಿಕೆಗಳ ಆಧಾರದ ಮೇಲೆ ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಕಲಂ 341, 323, 354, 376(ಡಿ), 506 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಕಲಂ 3(1)(w)(i) ಮತ್ತು 3(2)(v)(va) ಅಡಿಯಲ್ಲಿ ಆರೋಪಗಳು ಸಾಬೀತಾಗಿರುವುದಾಗಿ ತೀರ್ಪು ನೀಡಿತ್ತು.

ಅನಂತರ ಜು30 ರಂದು ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಜಗದೀಶ್ ವಿ.ಎನ್. ರವರು ಆರೋಪಿಗಳಿಗೆ ಕೆಳಕಂಡಂತೆ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಕಲಂ 376(ಡಿ) ಐಪಿಸಿ ಅಡಿಯಲ್ಲಿ ತಲಾ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹10,000/- ದಂಡ.
ಕಲಂ 354 ಐಪಿಸಿ ಅಡಿಯಲ್ಲಿ ತಲಾ 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹5,000/- ದಂಡ, ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿ 1 ತಿಂಗಳ ಕಾರಾಗೃಹ ಶಿಕ್ಷೆ.
ಕಲಂ 506 ಐಪಿಸಿ ಅಡಿಯಲ್ಲಿ ತಲಾ 1 ವರ್ಷದ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹2,000/- ದಂಡ, ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿ 15 ದಿನಗಳ ಕಾರಾಗೃಹ ಶಿಕ್ಷೆ.
ಕಲಂ 323 ಐಪಿಸಿ ಅಡಿಯಲ್ಲಿ ತಲಾ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ ₹1,000/- ದಂಡ, ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿ 15 ದಿನಗಳ ಕಾರಾಗೃಹ ಶಿಕ್ಷೆ. ಕಲಂ 341 ಐಪಿಸಿ ಅಡಿಯಲ್ಲಿ ತಲಾ ₹500/- ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಇದಲ್ಲದೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ (DLSA) ವತಿಯಿಂದ ನೊಂದ ಯುವತಿಗೆ ₹60,000/- ಪರಿಹಾರ ಮಂಜೂರು ಮಾಡಲಾಗಿದೆ.

LEAVE A REPLY

Please enter your comment!
Please enter your name here