Home ಅಪಘಾತ ಬೆಳ್ತಂಗಡಿ; ರೆಖ್ಯದಲ್ಲಿ ಕಾಡಾನೆ ದಾಳಿ ಶಂಕೆ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ; ರೆಖ್ಯದಲ್ಲಿ ಕಾಡಾನೆ ದಾಳಿ ಶಂಕೆ ವ್ಯಕ್ತಿಯ ಮೃತದೇಹ ಪತ್ತೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಕ್ಯ ಗ್ರಾಮದ ನೆಲ್ಯಡ್ಕ-ಇದ್ಮಾಳ್ ನಿವಾಸಿ ಬಾಲಕೃಷ್ಣ ಗೌಡ ಅವರು ಶನಿವಾರ ಸಂಜೆ ಆನೆ ದಾಳಿಯಿಂದ ಮೃತಪಟ್ಟಿರುವ ದುರ್ಘಟನೆ ಸಂಭವಿಸಿದೆ.

ಲಭ್ಯ ಮಾಹಿತಿಯ ಪ್ರಕಾರ, ಬಾಲಕೃಷ್ಣ ಗೌಡ ಅವರು ಮುಚ್ಚಿರಡ್ಕ ಭಾಗದಲ್ಲಿ ಕೆಲಸ ಮುಗಿಸಿ ಸಂಜೆ ಮನೆಗೆ ಮರಳದೇ ಇದ್ದ ಹಿನ್ನೆಲೆಯಲ್ಲಿ ಹುಡುಕಾಟ ನಡೆಸಿದಾಗ ಅವರ ಮಳೆರಕ್ಷಣೆಯ ಪ್ಲಾಸ್ಟಿಕ್ ದಾರಿಯಲ್ಲಿ ಕಾಣ ಸಿಕ್ಕಿದ್ದು ದಾರಿಯ ಮಧ್ಯೆ ಕಾಡಾನೆ ದಾಳಿ ನಡೆಸಿರಬಹುದು ಎನ್ನಲಾಗಿದೆ.
ಬಳಿಕ ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತದೇಹ ಪತ್ತೆಯಾಗಿದೆ.ಘಟನಾ ಸ್ಥಳದ ಸಮೀಪ ಆನೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಕಾಡಾನೆ ದಾಳಿಯಿಂದಲೇ ಅವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ

NO COMMENTS

LEAVE A REPLY

Please enter your comment!
Please enter your name here

Exit mobile version