Home ಸ್ಥಳೀಯ ಸಮಾಚಾರ ರೆಖ್ಯ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಗೌಡ  ಅವರ ಕುಟುಂಬಕ್ಕೆ ಪರಿಹಾರ ಹಸ್ತಾಂತರ

ರೆಖ್ಯ ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಗೌಡ  ಅವರ ಕುಟುಂಬಕ್ಕೆ ಪರಿಹಾರ ಹಸ್ತಾಂತರ

0
2

ಬೆಳ್ತಂಗಡಿ: ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಬಾಲಕೃಷ್ಣ ಗೌಡ ಅವರು ಆ.1ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ಲಭಿಸುವ ರೂ.20 ಲಕ್ಷ ಪರಿಹಾರದ ಪ್ರಥಮ ಹಂತವಾಗಿ ರೂ.5 ಲಕ್ಷ ಪರಿಹಾರ ಧನದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಉಳಿದ ರೂ.15 ಲಕ್ಷ ಪರಿಹಾರವನ್ನು ನೇರವಾಗಿ ಮೃತರ ವಾರೀಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡುವುದಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದರು. ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ (DFO) ರವಿಶಂಕ‌ರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಸುಬ್ಬಯ್ಯ ನಾಯ್ಕ ವಲಯ ಅರಣ್ಯಾಧಿಕಾರಿ (RFO), ತಹಶೀಲ್ದಾರ್ ಎಸ್‌.ಎನ್. ನರಗುಂದ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.ಮೃತ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಸರ್ಕಾರಿ ನೆರವು ಮತ್ತು ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಹರೀಶ್ ಪೂಂಜ ಅವರು ನಿರ್ದೇಶನ ನೀಡಿದರು.ಭಾನುವಾರ ಘಟನಾ ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುಬ್ಬಯ್ಯ ನಾಯ್ಕ, ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಚ್.ಪಿ., ಉಪವಲಯ ಅರಣ್ಯಾಧಿಕಾರಿಗಳು, ಧರ್ಮಸ್ಥಳ ಪೊಲೀಸ್‌ ಸಬ್ ಇನ್‌ಸ್ಪೆಕ್ಟರ್ ಸಮರ್ಥ ಗಾಣಿಗೇರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಮೃತದೇಹವನ್ನು ಸ್ಥಳದಲ್ಲೇ ಮಹಜರು ನಡೆಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆ  ನಡೆಸಲಾಯಿತು. 

NO COMMENTS

LEAVE A REPLY

Please enter your comment!
Please enter your name here