Home ಸ್ಥಳೀಯ ಸಮಾಚಾರ ಧರ್ಮಸ್ಥಳ; ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು

ಧರ್ಮಸ್ಥಳ; ಕುಸಿದು ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವು

0

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪದ ಮಂಜುನಾಥ ಹೋಟೆಲ್ ಬಳಿ ಈ ಅಪರಿಚಿತ ವ್ಯಕ್ತಿಯು ಅಸ್ವಸ್ಥ ಸ್ಥಿತಿಯಲ್ಲಿ ಮಲಗಿದ್ದನ್ನು ಸಾರ್ವಜನಿಕರು ಗಮನಿಸಿದ್ದರು. ಚಿಕಿತ್ಸೆಗಾಗಿ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಲು ಆ.3 ರಂದು ಬೆಳಿಗ್ಗೆ ಕರೆದೊಯ್ಯುವ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯ ವಯಸ್ಸು ಸುಮಾರು 60–65 ವರ್ಷ ಇರಬಹುದು ಎಂದು ಅಂದಾಜಿಸಲಾಗಿದ್ದು, ಮೃತರ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯ ಗುರುತು ಅಥವಾ ವಾರಸುದಾರರ ಬಗ್ಗೆ ಮಾಹಿತಿ ಇರುವವರು ತಕ್ಷಣ ಧರ್ಮಸ್ಥಳ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಧರ್ಮಸ್ಥಳ ಪೊಲೀಸರು ಮನವಿ ಮಾಡಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version