Home ಅಪರಾಧ ಲೋಕ ಮುದರಂಗಡಿ ಡೇವಿಡ್ ಡಿಸೋಜ ಕೊಲೆ ಪ್ರಕರಣ; ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಮುದರಂಗಡಿ ಡೇವಿಡ್ ಡಿಸೋಜ ಕೊಲೆ ಪ್ರಕರಣ; ಆರೋಪಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

1
0

ಉಡುಪಿ: ಜಿಲ್ಲೆಯ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ (ಆ.07) ಸಂಜೆ ಹಾಡಹಗಲೇ ಉದ್ಯಮಿಯೋರ್ವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಮುದರಂಗಡಿ ಪೇಟೆಯಲ್ಲಿ ಉದ್ಯಮಿ ಡೇವಿಡ್ ಡಿಸೋಜ ಕೊಲೆ ಮಾಡಲಾಗಿತ್ತು. ಇದೀಗ ಪೊಲೀಸರು ಆರೋಪಿ ರಾಜು ಎಂಬಾತನನ್ನು ಬಂಧಿಸಿದ್ದಾರೆ. ಈ ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ ಘಟನೆಯೂ ನಡೆದಿದೆ.

ಆರೋಪಿಯನ್ನು ಕಾಪು ಪಿಎಸ್‌ಐ ತೇಜಸ್ವಿ, ಕಾರ್ಕಳ ಗ್ರಾಮಾಂತರ ಪಿಎಸ್‌ಐ ಪ್ರಸನ್ನ ತಂಡವು ಬಂಧಿಸಿ ಕರೆತರುತ್ತಿರುವಾಗ ಬೈಂದೂರು ಸಮೀಪ ಒತ್ತಿನೆಣೆ ಪೋಲಿಸರಿಗೆ ಹಲ್ಲೆ ನಡೆಸಿ ಅರೋಪಿ ಪರಾರಿಯಾಗಲು ಯತ್ನಿಸಿದ್ದಾರೆ, ಈ ವೇಳೆ ಕಾಪು ಪಿಎಸ್‌ಐ ತೇಜಸ್ವಿಯವರು ತಮ್ಮ ಸರ್ವೀಸ್ ಪಿಸ್ತೂಲಿನಿಂದ ರಾಜು ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ.

ಈ ವೇಳೆ ಪಿಎಸ್‌ಐ ತೇಜಸ್ವಿ ಅವರಿಗೆ ಗಾಯವಾಗಿದ್ದು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆ ಗೆ ಉಡುಪಿ ಎಸ್ ಪಿ ಹರಿರಾಮ್ ಶಂಕರ್ ಭೇಟಿ ನೀಡಿದ್ದಾರೆ.

ಘಟನೆ ನಡೆದು ಕೆಲವೇ ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರ ಕ್ರಮಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ಇನ್ನೊಬ್ಬ ಆರೋಪಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

LEAVE A REPLY

Please enter your comment!
Please enter your name here