Home ಸ್ಥಳೀಯ ಸಮಾಚಾರ ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

ಚಾರ್ಮಾಡಿ ಘಾಟಿಯಲ್ಲಿ ಕಾಡಾನೆ

5
0


ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಭಾನುವಾರ ರಾತ್ರಿ ಮತ್ತೆ ಕಾಡಾನೆ ಕಂಡುಬಂದಿದೆ.
ಘಾಟಿ ಭಾಗದಲ್ಲಿ ಆಗಾಗ ಕಾಣ ಸಿಗುವ ಈ ಕಾಡಾನೆ ರಸ್ತೆ ಬದಿ ನಿಂತಿದ್ದು ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ತೆರಳಿದ್ದು ಕಾಡಾನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ನಡೆಸಿದ್ದಾರೆ. ಚಾರ್ಮಾಡಿ ಘಾಟಿಯಲ್ಲಿ ಕಾಡಾನೆಗಳು ಪ್ರತಿ ನಿತ್ಯ ಎಂಬಂತೆ‌ ಕಂಡು ಬರುತ್ತಿದೆ ಈ ಆನೆ ಈವರೆಗೆ ಜನರ ಮೇಲೆ‌ದಾಳಿ ನಡೆಸಿದಲ್ಲ ಆದರೂ ಆನೆ ರಸ್ತೆಯಲ್ಲಿಯೇ ಕಾಣಿಸುವುದು ಪ್ರಯಾಣಿಕರಲ್ಲಿ ಆತಂಕ ಹೆಚಚಿಸುತ್ತಿದೆ.

LEAVE A REPLY

Please enter your comment!
Please enter your name here