ಬೆಳ್ತಂಗಡಿ : ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ಬೆಳ್ತಂಗಡಿ ಕಂದಾಯ ಇಲಾಖೆ ಮೇಲೆ ದಿಢೀರ್ ದಾಳಿ ಮಾಡಿ ಪರಿಶೀಲನೆ ಮಾಡುತ್ತಿದ್ದಾರೆ.
ಬೆಳ್ತಂಗಡಿ ಆಡಳಿತ ಸೌಧದಲ್ಲಿರುವ ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಂದ ಲಂಚ ಪಡೆದು ಕೆಲಸ ಮಾಡುತ್ತಿರುವ ಬಗ್ಗೆ ಬಂದ ದೂರಿನ ಹಿನ್ನಲೆಯಲ್ಲಿ ಆ.12 ರಂದು ಬೆಳಗ್ಗೆ 11:30 ಕ್ಕೆ ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ಸುರೇಶ್ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದ ಏಳು ಮಂದಿಯ ತಂಡ ದಾಳಿ ಮಾಡಿ ಸಾರ್ವಜನಿಕರಿಂದ ಮಾಹಿತಿ ಕಲೆ ಹಾಕುತ್ತಿದ್ದು ತಾಲೂಕು ಕಚೇರಿಯ ಒಳಗೆ ವಿವಿಧ ಇಲಾಖೆಗಳ ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ




