Home ಬ್ರೇಕಿಂಗ್‌ ನ್ಯೂಸ್ ರಾಜ್ಯದಲ್ಲಿ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಡ್ಕಾ ನಿಷೇಧಿಸಿ ರಾಜ್ಯ ಸರಕಾರಾ ಆದೇಶ

ರಾಜ್ಯದಲ್ಲಿ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಡ್ಕಾ ನಿಷೇಧಿಸಿ ರಾಜ್ಯ ಸರಕಾರಾ ಆದೇಶ

0

ಬೆಂಗಳೂರು: ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಸರಕಾರವು ಮಹತ್ವದ ಆದೇಶ ಹೊರಡಿಸಿದ್ದು, ತಂಬಾಕು ಹಾಗೂ ಗುಟ್ಕಾ ಪಾನ್ ಮಸಾಲದಂತಹ ನಿಕೋಟಿನ್ ಹೊಂದಿರುವ ಉತ್ಪನ್ನಗಳಿಗೆ ಒಂದು ವರ್ಷ ಕಾಲ ಪೂರ್ಣ ನಿಷೇಧ ಹೇರಿದೆ.
ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಜನರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯದಲ್ಲಿ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮಾರಾಟ ಮತ್ತು ವಿತರಣೆಯನ್ನು ನಿಷೇಧಿಸುವ ಕುರಿತು ಆಗಸ್ಟ್ 10ರಂದು ಸರಕಾರಿ ಅಧಿಸೂಚನೆ ಹೊರಡಿಸಿದೆ. ಅಧಿಸೂಚನೆ ಹೊರಡಿಸಿದ ದಿನಾಂಕದಿಂದ ಒಂದು ವರ್ಷದ ಅವಧಿಗೆ ಇದು ಜಾರಿಯಲ್ಲಿರುತ್ತದೆ ಎಂದು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ವತಿಯಿಂದ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಉತ್ಪನ್ನಗಳ ವಿರುದ್ಧ ರಾಜ್ಯಾದ್ಯಂತ ಕಟ್ಟುನಿಟ್ಟಿನ ಜಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದವರು ತಿಳಿಸಿದ್ದಾರೆ.

ತಂಬಾಕು ಮತ್ತು/ಅಥವಾ ನಿಕೋಟಿನ್ ಹೊಂದಿರುವ ಗುಟ್ಕಾ ಪಾನ್ ಮಸಾಲಾ ಹಾಗೂ ಇತರ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹ, ಸಾಗಣೆ, ವಿತರಣೆ ಮತ್ತು ಮಾರಾಟದ ವಿರುದ್ಧ ಆಹಾರ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಪಾಸಣೆ ಹಾಗೂ ಜಾರಿ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ.

ನಿಷೇಧಿತ ತಂಬಾಕು ಹಾಗೂ ನಿಕೋಟಿನ್ ಉತ್ಪನ್ನಗಳ ತಯಾರಿಕೆ, ಮಾರಾಟ ಅಥವಾ ವಿತರಣೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ, ಆರೋಗ್ಯಕರ ಹಾಗೂ ವ್ಯಸನಮುಕ್ತ ಕರ್ನಾಟಕ ನಿರ್ಮಾಣಕ್ಕೆ ಸಾರ್ವಜನಿಕರು ಸಹಕರಿಸುವಂತೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಮನವಿ ಮಾಡಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version