
ಬೆಳ್ತಂಗಡಿ: ಬೆಂಗಳೂರು ನಗರದ ರಾಜೇಶ್ವರಿ ನಗರದಲ್ಲಿ ಬೆಳ್ತಂಗಡಿಯ ಯುವಕನೋರ್ವ ಹೆಂಡತಿಯನ್ನು ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.13 ರಂದು ಮಧ್ಯರಾತ್ರಿ ನಡೆದಿದಿದ್ದು.ಮೃತರು ಪದ್ಮಾವತಿ (29) ಹಾಗೂ ಸುಮಂತ್ ಜೈನ್ (32) ಎಂಬವರಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಲವಂತಗೆ ಗ್ರಾಮದ ಎಳನೀರು ನಿವಾಸಿಯಾಗಿರುವ ಸುಮಂತ್ ಜೈನ್(32) ಸಿವಿಲ್ ಎಂಜಿನಿಯರ್ ಆಗಿದ್ದರು. ಹುಬ್ಬಳಿ ಮೂಲದ ಪದ್ಮಾವತಿ(29) ವೈಟ್ ಫೀಲ್ಡ್ ಸಮೀಪದ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.
ಆ.13 ರಂದು ಮಧ್ಯರಾತ್ರಿ ಕೌಟುಂಬಿಕ ಕಲಹವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಸುಮಂತ್ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ನಂತರ ತನ್ನ ತಾಯಿಗೆ ನಾನು ಸಾಯುತ್ತಿದ್ದೇನೆ ಎಂದು ವಾಯ್ಸ್ ಮೆಸೇಜ್ ಕಳುಹಿಸಿರುವುದಾಗಿಯೂ ತಿಳಿದು ಬಂದಿದೆ
ತನ್ನ ಪಿಎಫ್ ಹಣ ಹಾಗೂ ಮನೆಯಲ್ಲಿನ ವಸ್ತುಗಳು ತೆಗೆದುಕೊಂಡು ಹೋಗುವಂತೆ ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ ಎನ್ನಲಾಗಿದ್ದು ಬಳಿಕ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮಾಹಿತಿ ಲಭ್ಯವಾಗುತ್ತಿದೆ. ಆ.14 ರಂದು ಕುಟುಂಬದವರು ಬೆಂಗಳೂರು ಮನೆಗೆ ತೆರಳಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದು ರಾಜಗೋಪಾಲನಗರ ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಈ ಜೋಡಿ ಮೂರು ವರ್ಷದ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಕಳೆದ ಒಂದೂವರೆ ವರ್ಷದಿಂದ ಬೆಂಗಳೂರಿನಲ್ಲಿ ವಾಸವಾಗಿದ್ದರು. ನಿನ್ನೆ ದಂಪತಿ ನಡುವೆ ಗಲಾಟೆ ನಡೆದಿದೆ ಎನ್ನಲಾಗಿದ್ದು ಗಲಾಟೆ ವಿಕೋಪಕ್ಕೆ ಹೋದಾಗ ಕೊಲೆ ಪ್ರಕರಣನಡೆದಿದೆ ಎಂದು ತಿಳಿದು ಬಂದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ
ಮನೆಯಲ್ಲಿ ಪೊಲೀಸರು, ಸೊಕೋ ಟೀಂನಿಂದ ಪರಿಶೀಲನೆ ನಡೆದಿದ್ದು. ಮೃತದೇಹಗಳ ಮಹಜರು ಹಾಗೂ ಮರಣೋತ್ತರ ಪರೀಕ್ಷೆಗಳು ಇನ್ನಷ್ಟೆ ನಡೆಯಬೇಕಾಗಿದೆ ಎಂದು ತಿಳಿದು ಬಂದಿದೆ.