Home ಶಾಲಾ ಕಾಲೇಜು ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

4
0


ಬೆಳ್ತಂಗಡಿ;  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಡಗರದಿಂದ ಆಚರಿಸಲಾಯಿತು. ಭಾರತೀಯ ಸೇನೆಯ ಮಾಜಿ ಸೈನಿಕರು,ಕರ್ನಾಟಕ ಅರಣ್ಯ ಇಲಾಖೆಯಲ್ಲಿ ವಲಯ ಅರಣ್ಯ ಅಧಿಕಾರಿಯಾಗಿರುವ ಶ್ರೀಯುತ ಜಯಕುಮಾರ್ ಅವರು ಧ್ವಜಾರೋಹಣವನ್ನು ನೆರವೇರಿಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದರು.ಜೊತೆಗೆ ಸ್ವಾತಂತ್ರ್ಯ ಹೋರಾಟ ವೀರರ ತ್ಯಾಗ ಹಾಗೂ ಅವರಿಂದ ಅಳವಡಿಸಿಕೊಳ್ಳಬೇಕಾದ ಗುಣಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು. ಇನ್ನೊಬ್ಬ ಮುಖ್ಯ ಅತಿಥಿ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಹಾಗೂ ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿಯಾಗಿ ನಿವೃತ್ತಿ ಹೊಂದಿರುವ ಶ್ರೀಯುತ ಸೋಮಶೇಖರ್ ಬಿ ಶೆಟ್ಟಿ ಇವರು ಮಾತನಾಡುತ್ತಾ ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳ ಅಗತ್ಯ ಅದರ ಒಳನೋಟಗಳು ಹಾಗೂ ಅದರ ಇತ್ತೀಚಿನ ಅಗತ್ಯತೆಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.ಇನ್ನೊಬ್ಬರಿಗೆ ಕೊಡುವ ಗುಣ ನಮಗೆ ಇರಬೇಕು.ಸಂಸ್ಕಾರ ಜೀವನ ರೂಪಿಸುತ್ತದೆ.ವಿದ್ಯಾವಂತರು ಹೃದಯವಂತರಾಗಬೇಕು ಎಂಬಿತ್ಯಾದಿ ವಿಚಾರಗಳನ್ನು ಉದಾಹರಣೆಯೊಂದಿಗೆ ವಿವರಿಸಿದರು. ದೇಶಪ್ರೇಮವನ್ನು ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಅವರ ಮಾರ್ಗದರ್ಶನದೊಂದಿಗೆ ಮೂಡಿ ಬಂದ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿನಿ ಕುಮಾರಿ ಅಲ್ಬಿನ ನಿರ್ವಹಿಸಿದ ಕಾರ್ಯಕ್ರಮದಲ್ಲಿ, ಜಸೀನಾ ಸ್ವಾಗತಿಸಿ, ಅಮೀತ್ ಅತಿಥಿಗಳ ಕಿರು ಪರಿಚಯ ಮಾಡಿದರು.
ಕೊನೆಯಲ್ಲಿ ತನುಶ್ರೀ ಧನ್ಯವಾದ ಇತ್ತರು.ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿಂಡಿಯನ್ನು ಹಂಚಿ ಸ್ವಾತಂತ್ರ್ಯದ ಸವಿಯನ್ನು ಉಣಬಡಿಸಲಾಯಿತು.ಶಾಲೆಯ ಶಿಕ್ಷಕ ಶಿಕ್ಷಕೇತರ ವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

LEAVE A REPLY

Please enter your comment!
Please enter your name here