Home ಅಪರಾಧ ಲೋಕ ಚಾಮರಾಜ ನಗರ; ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಬಲಿ ಜನರ ಆಕ್ರೋಶ

ಚಾಮರಾಜ ನಗರ; ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಬಲಿ ಜನರ ಆಕ್ರೋಶ

1
0

ಬೆಂಗಳೂರು; ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಸ್ವಾತಂತ್ರ್ಯೋತ್ಸವದ ಮುಂಜಾನೆಯೇ ಭೀಕರ ಶೂಟೌಟ್‌ ನಡೆದಿದ್ದು, ಒಂದೇ ಗ್ರಾಮದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಳ್ಳಬೇಟೆ ಆರೋಪದಡಿ ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಫೈರಿಂಗ್‌ನಲ್ಲಿ ಈ ಸಾವು ಸಂಭವಿಸಿದ್ದು, ಇಡೀ ಜಿಲ್ಲೆಯಲ್ಲಿ ಆಕ್ರೋಶದ ಜ್ವಾಲೆ ಹೊತ್ತಿ ಉರಿಯುತ್ತಿದೆ.

ಮೃತರ ವಿವರ
ಅಂತೋಣಿಸ್ವಾಮಿ (50):
ಜಾನ್‌ರೋಸ್ ಪೀಟರ್ (42)
ಕುಮಾರ್ (33) ಮೃತ ವ್ಯಕ್ತಿಗಳಾಗಿದ್ದಾರೆ

ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿರುವ ಜೋಸೆಫ್ ಎಂಬಾತನನ್ನು ಮೈಸೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪತ್ನಿ ದೂರಿನಂತೆ ಪ್ರಕರಣ‌ದಾಖಲು

ಅರಣ್ಯಾಧಿಕಾರಿಗಳು ನಡೆಸಿದ ಗುಂಡಿನ ದಾಳಿಗೆ ಮೂವರು ಮೃತಪಟ್ಟಿದ್ದು, ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ FIR ದಾಖಲಾಗಿದೆ. ಮೃತ ಆಥೋಣಿಸಾಮಿ ಪತ್ನಿ ಲೂರ್ದ್ ಮೇರಿ ನೀಡಿದ ದೂರಿನ ಆಧಾರದಲ್ಲಿ ಚಾಮರಾಜನಗರದ ಹನೂರು ಪೊಲೀಸ್ ಠಾಣೆಯಲ್ಲಿ ಎಫ್.ಐ ಆರ್ ದಾಖಲಿಸಲಾಗಿದೆ


ದಕ್ಷಿಣ ವಲಯ ಐಜಿ ಬೋರಲಿಂಗೇಗೌಡ, ಚಾಮರಾಜನಗರ ಎಸ್ಪಿ  ಸಮ್ಮುಖದಲ್ಲಿ ಅರಣ್ಯ ಅಧಿಕಾರಿಗಳು ಹನೂರು ವಿಭಾಗ ಎಂದು ಆರೋಪಿಗಳನ್ನಾಗಿಸಿ ಕೇಸ್ ದಾಖಲಿಸಲಾಗಿದೆ. ನಿರ್ದಿಷ್ಟ ಹೆಸರು ನಮೂದಿಸದೇ ಅರಣ್ಯ ಅಧಿಕಾರಿಗಳು ಎಂದು ಎಫ್‌ಐಆ‌ರ್ ನಲ್ಲಿ ನಮೂದಿಸಲಾಗಿದೆ ಬಿಎನ್ ಎಸ್ 103(1) ಅಡಿಯಲ್ಲಿ ಕೇಸು ದಾಖಲಿಸಿಕೊಂಡಿದ್ದಾರೆ

ತಾವು ಹಸು ಸಾಕಿಕೊಂಡು ಜೀವನ ಸಾಗಿಸುತ್ತಿದ್ದೇವೆ.  ನಮ್ಮ ಹಸುಗಳು ಕಾಡಿಗೆ ಮೇಯಲು ಹೋಗಿದ್ದವು. ಅವುಗಳು ವಾಪಸ್‌ ಬಂದಿರಲಿಲ್ಲ.ಹಸುಗಳನ್ನು ಹುಡುಕಿಕೊಂಡು ಬರಲು  (ಆಗಸ್ಟ್ 14) ಸಂಜೆ ನನ್ನ ಪತಿ ಆಥೋಣಿಸಾಮಿ, ತಮ್ಮ ಕುಮಾ‌ರ್, ಮೈದುನ ಪೀಟ‌ರ್, ದೊಡ್ಡಪ್ಪನ ಮಗ ಜೋಸೆಫ್ ತೆರಳಿದ್ದರು.
ಬೆಳಿಗ್ಗೆ ಆದರೂ ಅವರು ಮನೆಗೆ ಬಂದಿರಲಿಲ್ಲ. ಬೆಳಿಗ್ಗೆ ಜೋಸೆಫ್ ಕರೆ ಮಾಡಿ ಘಟನೆ ವಿವರಿಸಿದ.
ಮರಿಯಮಂಗಲ ಗ್ರಾಮದಿಂದ 4 ಕಿಮೀ ಕಾಡಿನಲ್ಲಿ ನಾವು ವಿಶ್ರಾಂತಿ ಮಾಡುತ್ತಾ ಮಲಗಿದ್ದೆವು. ಬೆಳಿಗಿನ ಜಾವ ಸುಮಾರು 3 ರಿಂದ 5 ಗಂಟೆ ಸಂದರ್ಭದಲ್ಲಿ ಅರಣ್ಯ ಅಧಿಕಾರಿಗಳು ಇದ್ದಕ್ಕಿದ್ದಂತೆ
ಶೂಟ್ ಮಾಡಿದ್ರು. ಈ ವೇಳೆ ಸ್ಥಳದಲ್ಲೇ ಮೂವರು ಮೃತಪಟ್ಟರು. ನಾನು ತಪ್ಪಿಸಿಕೊಂಡು ಬಂದೆ ಎಂದು ಜೋಸೆಫ್‌ ತಿಳಿಸಿದ್ರು. ಅರಣ್ಯ ಇಲಾಖೆ ಅಧಿಕಾರಿಗಳು ಕೊಲೆ ಮಾಡಿದ್ದಾರೆ ಎಂದು ಲೂರ್ದಾಮೇರಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಅದರಂತೆ ಪ್ರಕರಣ ದಾಖಲಿಸಲಾಗಿದೆ.

ಅರಣ್ಯ ಇಲಾಖೆ ಸಮರ್ಥನೆ

ಕಾವೇರಿ ವನ್ಯಧಾಮದ ಎಸಿಎಫ್ ಮರಿಸ್ವಾಮಿ ಮತ್ತು ಅರಣ್ಯ ಅಧಿಕಾರಿಗಳ ಪ್ರಕಾರ

ರಾತ್ರಿ ವೇಳೆ ಜಿಂಕೆ ಬೇಟೆಯಾಡಿ ಮಾಂಸ ತರುತ್ತಿದ್ದ ನಾಲ್ವರನ್ನು ತಡೆಯಲು ಯತ್ನಿಸಲಾಯಿತು.
ಆರೋಪಿಗಳು ದಾಳಿಗೆ ಮುಂದಾದಾಗ ಸಿಬ್ಬಂದಿ ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ.

ಘಟನೆಯಲ್ಲಿ ಓರ್ವ ಅರಣ್ಯ ಸಿಬ್ಬಂದಿಗೂ ಗಾಯಗಳಾಗಿದ್ದು, ಕೊಳ್ಳೆಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ಹೇಳುತ್ತಿದ್ದಾರೆ.

ಕಣ್ಣೀರಿಡುತ್ತಿರುವ ಕುಟುಂಬಸ್ಥರು ಜನರ ಪ್ರತಿಭಟನೆ;

ಮೃತರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಗ್ರಾಮಸ್ಥರು ಶಾಗ್ಯದ ಕಳ್ಳಬೇಟೆ ತಡೆ ಶಿಬಿರಕ್ಕೆ (Anti-Poaching Camp) ನುಗ್ಗಿ ಪೀಠೋಪಕರಣ, ಕಿಟಕಿ ಗಾಜುಗಳನ್ನು ಧ್ವಂಸಗೊಳಿಸಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಆರೋಪಿ ಅರಣ್ಯ ಇಲಾಖೆ‌ಅಧಿಕಾರಿಗಳ ವಿರುದ್ದ ಕೊಲೆ ಪ್ರಕರಣ‌ದಾಖಲಿಸಿ ವಿಚಾರಣೆ ನಡೆಸಬೇಕು ಎಂದು ಒತ್ತಾಯಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here