Home ಅಪರಾಧ ಲೋಕ ವಿಟ್ಲ; ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ‌ ಆರೋಪಿ ಬಂಧನ

ವಿಟ್ಲ; ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ‌ ಆರೋಪಿ ಬಂಧನ

0

ವಿಟ್ಲ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಬಂಧಿತ ಆರೋಪಿ‌ ವಿಟ್ಲ ಕೊಡಂಗಾಯಿ ನಿವಾಸಿ ಉಮೇಶ್ (53) ಎಂಬಾತನಾಗಿದ್ದಾನೆ.
ಆ.15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್‌ ನಿಲ್ದಾಣದಿಂದ ಅಪರಿಚಿತ ವ್ಯಕ್ತಿಯೊಬ್ಬರು ಕುಳಿತು ಪ್ರಯಾಣಿಸುತ್ತಿದ್ದ ವೇಳೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ಬಳಿಕ ಬಾಲಕ ಮನೆಗೆ ತೆರಳಿದ ಸಂದರ್ಭದಲ್ಲಿ ಅದೇ ವ್ಯಕ್ತಿ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅದರಂತೆ ಆರೋಪಿ‌ವಿರುದ್ದ ಪೋಕ್ಸೋ ಕಾಯ್ದೆಯ ಅಡಿಯಲ್ಲಿ ಪ್ರಕರಣ‌ ದಾಖಲಿಸಿಕೊಂಡ‌ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version