ಬೆಳ್ತಂಗಡಿ: ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದು, ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ನೇತ್ರಾವತಿ ನಗರ ಬೊಳ್ಳೂರುಬೈಲು ಎಂಬಲ್ಲಿ ಆ18 ರಂದು ಬೆಳ್ತಂಗಡಿ ಪೊಲೀಸರು ನಿಂತಿದ್ದ ವೇಳೆ KA-21-B-3670 ನೋಂದಣಿ ಸಂಖ್ಯೆಯ ಟಿಪ್ಪರ್ ಲಾರಿ ಪೊಲೀಸ್ ಜೀಪನ್ನು ಕಂಡ ತಕ್ಷಣ ಟಿಪ್ಪರ್ ಚಾಲಕ ಲಾರಿಯನ್ನು ಸೇತುವೆ ಮೇಲೆ ನಿಲ್ಲಿಸಿ ಅಲ್ಲಿಂದ ಪರಾರಿಯಾಗಿದ್ದಾನೆ.
ಅನುಮಾನಗೊಂಡ ಪೊಲೀಸರು ಟಿಪ್ಪರ್ ಪರಿಶೀಲಿಸಿದಾಗ ಅದರಲ್ಲಿ ಮರಳು ತುಂಬಿರುವುದು ಪತ್ತೆಯಾಗಿದೆ. ಟಿಪ್ಪರ್‌ನಲ್ಲಿದ್ದ ಮರಳಿನ ಅಂದಾಜು ಮೌಲ್ಯ 10,000 ಹಾಗೂ ಟಿಪ್ಪರ್‌ನ ಅಂದಾಜು ಮೌಲ್ಯ 3.50 ಲಕ್ಷ ಎಂದು ಅಂದಾಜಿಸಲಾಗಿದೆ.
ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪರಾರಿಯಾದ ಟಿಪ್ಪರ್ ಚಾಲಕನ ವಿರುದ್ಧ ಪ್ರಕರಣದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.










