Home ರಾಜಕೀಯ ಸಮಾಚಾರ ಬೆಳ್ತಂಗಡಿ; ಡಿ.ಸಿ ಮನ್ನಾ ಜಮೀನು ಹಂಚಿಕೆ‌ ವಿಚಾರ ಕೆ.ಪಿ.ಸಿ.ಸಿ‌ ಅಧ್ಯಕ್ಷ‌ ಬಿ.ಕೆ ಹರಿಪ್ರಸಾದ್ ಅವರನ್ನು ಭೇಟಿಯಾದ‌‌...

ಬೆಳ್ತಂಗಡಿ; ಡಿ.ಸಿ ಮನ್ನಾ ಜಮೀನು ಹಂಚಿಕೆ‌ ವಿಚಾರ ಕೆ.ಪಿ.ಸಿ.ಸಿ‌ ಅಧ್ಯಕ್ಷ‌ ಬಿ.ಕೆ ಹರಿಪ್ರಸಾದ್ ಅವರನ್ನು ಭೇಟಿಯಾದ‌‌ ತಾಲೂಕಿನ ದಲಿತ ಮುಖಂಡರು

3
0

ಬೆಳ್ತಂಗಡಿ;  ಪ.ಜಾತಿ/ ಪಂಗಡಗಳ ಹಲವು ವರ್ಷಗಳ ಬೇಡಿಕೆಯಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಅವರನ್ನು ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹಾಗೂ ಬ್ಲಾಕ್ ಕಾಂಗ್ರೆಸ್ (ನಗರ) ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ ರವರ ನೇತೃತ್ವದಲ್ಲಿ ತಾಲೂಕಿನ ದಲಿತ ನಾಯಕರು ಭೇಟಿಯಾದರು.

ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ಘೋಷಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿಯಾಗಿ ಪ್ರಣಾಳಿಕೆಯ ಭಾಗವಾಗಿರುವ ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ಸರ್ಕಾರದ ಮಟ್ಟದಲ್ಲಿ ಆದೇಶ ನೀಡುವ ಬಗ್ಗೆ ಗಮನ ಸೆಳೆಯಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಡಿಸಿ ಮನ್ನಾ ಜಮೀನು ಹಂಚಿಕೆ ಬಗ್ಗೆ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆಗೆ ಮಾತುಕತೆ ನಡೆಸುವುದಾಗಿ ಬರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ , ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶೇಖರ್‌ ಕುಕ್ಕೇಡಿ ದಲಿತ ಮುಖಂಡರುಗಳಾದ ಗಣೇಶ್ ಪ್ರಸಾದ್ ಮೂಡಬಿದಿರೆ , ಬಿ.ಕೆ ವಸಂತ್ , ಬೇಬಿ ಸುವರ್ಣ , ವೆಂಕಣ್ಣ ಕೊಯ್ಯೂರು , ನೇಮಿರಾಜ್ ಕಿಲ್ಲೂರು , ರಮೇಶ್ ಆರ್ , ರವಿಚಂದ್ರ ನಾಯ್ಕ್ ಮುಂಡಾಜೆ , ಪ್ರಭಾಕರ್ ಶಾಂತಿಗೋಡು , ಚೆನ್ನಕೇಶವ , ಶೇಖರ್ ಲಾಯಿಲ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here