Home ರಾಷ್ಟ್ರ/ರಾಜ್ಯ ಹಾನೂರು ಶೂಟೌಟ್ ಪ್ರಕರಣ: ಸೂಕ್ತ ಕ್ರಮಕ್ಕೆ ಕರ್ನಾಟಕ ಕ್ರೈಸ್ತ ಸಂಘಟನೆಯ ಒತ್ತಾಯ.

ಹಾನೂರು ಶೂಟೌಟ್ ಪ್ರಕರಣ: ಸೂಕ್ತ ಕ್ರಮಕ್ಕೆ ಕರ್ನಾಟಕ ಕ್ರೈಸ್ತ ಸಂಘಟನೆಯ ಒತ್ತಾಯ.

0
3

ಬೆಳ್ತಂಗಡಿ;  ಹಾನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಸತ್ಯಾಸತ್ಯತೆಗಳನ್ನು ಸಮಗ್ರವಾಗಿ ಪರಿಶೀಲಿಸಿ, ಸಂತ್ರಸ್ತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಕ್ರೈಸ್ತ ಸಂಘಟನೆಯ ವತಿಯಿಂದ ಮನವಿ ಸಲ್ಲಿಸಲಾಯಿತು.

ಕರ್ನಾಟಕ ಕ್ರೈಸ್ತ ಸಂಘಟನೆಯ ನೇತೃತ್ವದಲ್ಲಿ ಶ್ರೀ ಸ್ಟಾನಿ ಪಿಂಟೋ ಅವರ ನೇತೃತ್ವದಲ್ಲಿ ಮಾನ್ಯ ಉಪಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ಅರಣ್ಯ, ಪರಿಸರ ಮತ್ತು ಪರಿಸರ ವಿಜ್ಞಾನ ಖಾತೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಕಥೋಲಿಕ್ ಸಭಾ ಕರ್ನಾಟಕ ರಾಜ್ಯಾಧ್ಯಕ್ಷರಾದ ಶ್ರೀ ಆಲ್ವಿನ್ ಡಿಸೋಜಾ ಅವರು ಸಹ ಉಪಸ್ಥಿತರಿದ್ದರು..

ಈ ಸಂದರ್ಭದಲ್ಲಿ ಕೆಸಿಎಸ್ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಶ್ರೀ ರಂಜಿತ್ ಸೇರಿದಂತೆ ಕೆ ಸಿ ಎಸ್ ತಂಡದ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

ಪ್ರಕರಣದ ಸಂಪೂರ್ಣ ಹಿನ್ನೆಲೆಯನ್ನು ನಿಷ್ಪಕ್ಷಪಾತವಾಗಿ ಪರಿಶೀಲಿಸಿ, ಸತ್ಯಾಸತ್ಯತೆಗಳನ್ನು ಬಹಿರಂಗಪಡಿಸುವುದರ ಜೊತೆಗೆ ಸಂತ್ರಸ್ತರಿಗೆ ನ್ಯಾಯ ದೊರಕುವಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

NO COMMENTS

LEAVE A REPLY

Please enter your comment!
Please enter your name here