ಬೆಳ್ತಂಗಡಿ; ಕನ್ಯಾಡಿ-2:ಈ ದಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2 ಇಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಿಯೋ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಇಕೋ ಕ್ಲಬ್ ಮೂಲಕ ಪರಿಸರ ಜಾಗೃತಿ ಮತ್ತು ಮಾದಕ ವ್ಯಸನದ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರು ಕೆ .ನಂದ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ನೆರವೇರಿತು. ವೇದಿಕೆಯಲ್ಲಿರುವ ಗಣ್ಯರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಳ್ತಂಗಡಿ ಲಯನ್ಸ್ ಸಂಸ್ಥೆಯ ಗೌರವಾನ್ವಿತ ಸದಸ್ಯರೂ ನಿವೃತ್ತ ಯೋಧರು ಆಗಿರುವ ಲಯನ್ ಡಾ. ಗೋಪಾಲಕೃಷ್ಣ ಕಾಂಚೋಡು ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಕ್ಕಳಿಗೆ ಪರಿಸರ ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ಇವರು “ಸಾವಯವ ಕೃಷಿಯಿಂದ ತಯಾರಿಸಿದ ಆಹಾರಗಳನ್ನು ಸೇವಿಸುವುದರಿಂದ ನಮ್ಮ ಆರೋಗ್ಯವು ಉತ್ತಮವಾಗಿರುತ್ತದೆ ” ಜೊತೆಗೆ ಸಮಾಜಮುಖಿ ಸೇವೆಯನ್ನು ಮಾಡುವುದರಿಂದ ನಮ್ಮ ಜೀವನ ಸಾರ್ಥಕತೆ ಕಾಣುತ್ತದೆ” ಎನ್ನುವ ಸಂದೇಶವನ್ನು ತಿಳಿಸಿದರು.ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ಬಿನ ಅಧ್ಯಕ್ಷರು ರಘುರಾಮ ಶೆಟ್ಟಿ ಮಾದಕ ದ್ರವ್ಯದ ದುಷ್ಪರಿಣಾಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. “ಪ್ರತಿಯೊಂದು ಮನೆಯಲ್ಲೂ ವ್ಯಸನಕ್ಕೆ ಒಳಗಾದ ವ್ಯಕ್ತಿಗಳು ವ್ಯಸನ ಮುಕ್ತಾರಾದರೆ ಇಡೀ ದೇಶವೇ ವ್ಯಸನ ಮುಕ್ತವಾಗುತ್ತದೆ” ಎಂಬ ಸಂದೇಶದೊಂದಿಗೆ ಮಕ್ಕಳಿಗೆ ಜಾಗೃತಿಯನ್ನು ಮೂಡಿಸಿದರು.ಅತಿಥಿಯಾಗಿ ಅರುಣ್ ಕುಮಾರ್ ಶೆಟ್ಟಿ ದೊಂಡೋಲೆ ನಿವೃತ್ತ ಯೋಧರು,ಕೋಶಾಧಿಕಾರಿ ಲಯನ್ ನಾಣ್ಯಪ್ಪ ನಾಯ್ಕ, ಲಯನ್ ಸದಸ್ಯರು ಭುಜ ಬಲಿ , ಪ್ರಭಾಕರ ಗೌಡ ಬೊಲ್ಮಾ , ರಾಜೇಂದ್ರ ಅಜ್ರಿ,ಲಿಯೋ ಕ್ಲಬ್ ನ ಅಧ್ಯಕ್ಷರಾದ ಅಭಿಜ್ಞಾ ಬೋಲ್ಮಾ ಕೋಶಾಧಿಕಾರಿ ರೋಹನ್ ಪವಾರ್ , ಸದಸ್ಯರುಗಳಾದ ಕುಮಾರಿ ಸ್ಮಿತಾ ಮತ್ತು ಕುಮಾರಿ ಲಿಖಿತ,ಗೌರವ ಸಲಹೆಗಾರರಾದ ನೀಲಕಂಠ ಶೆಟ್ಟಿ, ಚಾಮರಾಜ ಇಂದ್ರ, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಸರ್ವ ಸದಸ್ಯರು, ಶಾಲೆಯ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿವೃಂದ , ಅಕ್ಷರ ದಾಸೋಹ ಸಿಬ್ಬಂದಿ ಉಪಸ್ಥಿತರಿದ್ದರು. ಇವರೆಲ್ಲರ ಸಮ್ಮುಖದಲ್ಲಿ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಇವರನ್ನು ಶಾಲಾವತಿಯಿಂದ ಗೌರವಿಸಲಾಯಿತು. ಇವರ ಗೌರವಾರ್ಪಣ ಪತ್ರವನ್ನು ಅತಿಥಿ ಶಿಕ್ಷಕಿ ಶ್ರೀಮತಿ ಜಯಶ್ರೀ ಇವರು ವಾಚಿಸಿದರು.
ನಂತರ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಲಯನ್ ಡಾ.ಗೋಪಾಲಕೃಷ್ಣ ಕಾಂಚೋಡು ಇವರು ಡ್ರ್ಯಾಗನ್ ಫ್ರೂಟ್ಸ್ ವಿತರಿಸಿದರು. ಈ ಕಾರ್ಯಕ್ರಮವನ್ನು ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ,ಜ್ಞಾನದೀಪ ಶಿಕ್ಷಕಿ ಶ್ರೀಮತಿ ತೇಜಸ್ವಿ ವಂದಿಸಿ, ಶ್ರೀಮತಿ ವಿಜಯ ಕಾರ್ಯಕ್ರಮವನ್ನು ನಿರೂಪಿಸಿದರು.













