ಬೆಳ್ತಂಗಡಿ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಸುಮಾರು 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪೊಲೀಸರು ಚಿಕ್ಕಮಗಳೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ.
ಪುಂಜಾಲಕಟ್ಟೆ ಠಾಣಾ ಅ.ಕ್ರ. 156/2016, ಕಲಂ 379 ಐಪಿಸಿ ಹಾಗೂ 42, 42, 44 MMRD ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನಿವಾಸಿ ಶಬೀರ್ ಎಂಬಾತನು ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.
ಖಚಿತ ಮಾಹಿತಿ ಆಧರಿಸಿ ಪುಂಜಾಲಕಟ್ಟೆ ಠಾಣೆಯ ಹೆಚ್‌ಸಿ 1023 ರಾಜೇಶ್, ಸಿಪಿಸಿ 2276 ಚೋಳಪ್ಪ ಸಂಶಿ ಹಾಗೂ ಸಿಪಿಸಿ 2524 ನಾಗರಾಜ್ ಅವರು ಚಿಕ್ಕಮಗಳೂರಿನಲ್ಲಿ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ.
ದಸ್ತಗಿರಿ ಬಳಿಕ ಆರೋಪಿಯನ್ನು ಆಗಸ್ಟ್ 22ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.









