Home ಸ್ಥಳೀಯ ಸಮಾಚಾರ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿಗಳ ಭೇಟಿ

ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಧರ್ಮಸ್ಥಳ ಧರ್ಮಾಧಿಕಾರಿಗಳ ಭೇಟಿ

0

ಬೆಳ್ತಂಗಡಿ; ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ (ರಿ.), ಲಾಯಿಲ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶ್ರೀ ರಾಘವೇಂದ್ರ ಸ್ವಾಮಿಗಳ 355ನೇ ಆರಾಧನ ಮಹೋತ್ಸವವು 2026ರ ಆಗಸ್ಟ್‌ 29ರ ಶನಿವಾರದಿಂದ ಆಗಸ್ಟ್‌ 31ರ ಸೋಮವಾರದವರೆಗೆ ವಿಜೃಂಭಣೆಯಿಂದ ನಡೆಯಲಿದ್ದು, ಇದರ ಪ್ರಯುಕ್ತ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಲು ಅವರ ಆಶೀರ್ವಾದವನ್ನು ಕೋರಲಾಯಿತು.

ಈ ಸಂದರ್ಭದಲ್ಲಿ ಡಾ. ವೀರೇಂದ್ರ ಹೆಗ್ಗಡೆಯವರು ಆರಾಧನ ಮಹೋತ್ಸವದ ಕುರಿತು ಸಂಪೂರ್ಣ ಮಾಹಿತಿಯನ್ನು ವಿಚಾರಿಸಿ, ಕಾರ್ಯಕ್ರಮದ ಯಶಸ್ಸಿಗೆ ಹೃತ್ಪೂರ್ವಕ ಶುಭಾಶಯಗಳನ್ನು ಹಾಗೂ ತಮ್ಮ ಆಶೀರ್ವಾದವನ್ನು ನೀಡಿದರು.

ಈ ಭೇಟಿಯಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀ ಪೀತಾಂಬರ ಹೇರಾಜೆ, ಕಾರ್ಯದರ್ಶಿಯಾದ ಶ್ರೀ ವಸಂತ ಸುವರ್ಣ, ಕೋಶಾಧಿಕಾರಿಯಾದ ಶ್ರೀ ಶ್ರವಣ್ ರಾಜ್, ಉತ್ಸವ ಸಮಿತಿ ಸದಸ್ಯರಾದ ಶ್ರೀ ನಾರಾಯಣ ಮೆಚ್ಚಿನ, ಶ್ರೀ ನಿತ್ಯಾನಂದ ನಾವರ ಹಾಗೂ ಇತರರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version