Home ಅಪರಾಧ ಲೋಕ ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಸಹಿತ ಆರೋಪಿ ವಶಕ್ಕೆ

ಅಕ್ರಮವಾಗಿ ಜಾನುವಾರು ಸಾಗಾಟ: ವಾಹನ ಸಹಿತ ಆರೋಪಿ ವಶಕ್ಕೆ

0


ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪದ ಮೇರೆಗೆ ಪುತ್ತೂರು ನಗರ ಠಾಣಾ ಪೊಲೀಸರು ಪಿಕ್‌ಅಪ್ ವಾಹನ ಸಹಿತ ಓರ್ವನನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿದ್ದಾರೆ.
ಆಗಸ್ಟ್ 23ರ ಬೆಳಗ್ಗೆ ಆನಡ್ಕ ಕಡೆಯಿಂದ ಪಡೀಲ್ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ನಗರ ಠಾಣಾ ಪೊಲೀಸ್ ಉಪನಿರೀಕ್ಷಕ ಸುರೇಶ್ ಸಿ.ಟಿ. ಅವರಿಗೆ ಲಭಿಸಿತ್ತು. ಮಾಹಿತಿ ಆಧರಿಸಿ ಪೊಲೀಸರು ಸಿಬ್ಬಂದಿಯೊಂದಿಗೆ ಚಿಕ್ಕಮುಡ್ನೂರು ಗ್ರಾಮದ ಜಿಡೆಕಲ್ಲು ಬಳಿ KA 19 D 0948 ನೋಂದಣಿಯ ಪಿಕ್‌ಅಪ್ ವಾಹನವನ್ನು ತಡೆದು ಪರಿಶೀಲನೆ ನಡೆಸಿದರು.
ಈ ವೇಳೆ ವಾಹನದಲ್ಲಿ ಮೂರು ಜಾನುವಾರುಗಳನ್ನು ಹಿಂಸಾತ್ಮಕವಾಗಿ ಕಟ್ಟಿ ಹಾಕಿರುವುದು ಪತ್ತೆಯಾಗಿದೆ. ವಾಹನ ಚಾಲಕ ಮಹಮ್ಮದ್ ಜಬ್ಬಾರ್‌ನನ್ನು ವಿಚಾರಿಸಿದಾಗ, ಶಾಂತಿಗೋಡು ಗ್ರಾಮದ ನಿವಾಸಿ ಅಶೋಕ್ ಎಂಬವರಿಂದ ಜಾನುವಾರುಗಳನ್ನು ಖರೀದಿಸಿದ್ದು, ಯಾವುದೇ ಪರವಾನಿಗೆ ಇಲ್ಲದೆ ವಧೆ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಜಾನುವಾರುಗಳ ಸಹಿತ ಪಿಕ್‌ಅಪ್ ವಾಹನ ಹಾಗೂ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 101/2026ರಂತೆ ಪ್ರಕರಣ ದಾಖಲಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version