Home ಕ್ರೀಡಾ ಸಮಾಚಾರ ಉಪ್ಪಿನಂಗಡಿ : ನಾಲ್ಕು ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ವಾರಂಟ್ ಆರೋಪಿ ಬಂಧನ

ಉಪ್ಪಿನಂಗಡಿ : ನಾಲ್ಕು ವರ್ಷಗಳಿಂದ ತಲೆಮರೆಸಿ ಕೊಂಡಿದ್ದ ವಾರಂಟ್ ಆರೋಪಿ ಬಂಧನ

0


ಉಪ್ಪಿನಂಗಡಿ: ಆರ್.ಕೆ. ಚಿನ್ನದಂಗಡಿಯಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನಾಲ್ಕು ವರ್ಷಗಳಿಂದ ಪುತ್ತೂರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ.
ರಾಜಸ್ಥಾನ ರಾಜ್ಯದ ಬೂಂದಿ ಜಿಲ್ಲೆಯ ಗುರುದ್ವಾರ ಸಮೀಪದ ಡೊಂಗ್ರಿ ನಿವಾಸಿ ಮೊಹಮ್ಮದ್ ಅವರ ಪುತ್ರ ಜಮಿಲ್ ಚಾಚಾ (62) ಬಂಧಿತ ಆರೋಪಿ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಆರ್.ಕೆ. ಚಿನ್ನದಂಗಡಿ ಕಳ್ಳತನ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಶಿಕ್ಷೆ ಅನುಭವಿಸಿದ್ದ ಈತ, ಬಳಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿದ್ದ.
ಆರೋಪಿಯ ವಿರುದ್ಧ ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದ್ದ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಹೆಚ್.ಸಿ. ಗಜೇಂದ್ರ ನಾಯ್ಕ್ ಹಾಗೂ ರಾಮಣ್ಣ ಗೌಡ ಅವರು ಆ.22ರಂದು ರಾಜಸ್ಥಾನದ ಬೂಂದಿ ಜಿಲ್ಲೆಯ ತಿರತ್ ಮೇರಾನ್ ಎಂಬಲ್ಲಿಗೆ ತೆರಳಿ ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಉಪ್ಪಿನಂಗಡಿಗೆ ಕರೆತಂದು ಆ.24ರಂದು ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ 10 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ, ಉಪ್ಪಿನಂಗಡಿ ಇನ್ಸ್‌ಪೆಕ್ಟರ್ ನಾಗರಾಜ್ ಹೆಚ್.ಇ. ಅವರ ನೇತೃತ್ವದಲ್ಲಿ ಹಾಗೂ ಉಪ್ಪಿನಂಗಡಿ ಸಬ್‌ಇನ್ಸ್‌ಪೆಕ್ಟರ್ ಸುತೇಶ್ ಅವರ ತಂಡದ ಸಿಬ್ಬಂದಿಗಳಾದ ಗಜೇಂದ್ರ ನಾಯ್ಕ್ ಮತ್ತು ರಾಮಣ್ಣ ಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version