Home ಅಪರಾಧ ಲೋಕ ಧರ್ಮಸ್ಥಳ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಯ ಬಂಧನ

ಧರ್ಮಸ್ಥಳ: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ; ಆರೋಪಿಯ ಬಂಧನ

0

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿ, ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಬಾಲಕಿಯೊಂದಿಗೆ ಕಳೆದ ವರ್ಷ ಸೆಪ್ಟೆಂಬರ್‌ನಿಂದ ನವೆಂಬರ್‌ ಅವಧಿಯಲ್ಲಿ ಆರೋಪಿ ಶ್ರೀಕಾಂತ್‌ (21) ಎಂಬಾತ ಬಲವಂತವಾಗಿ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಒಡ್ಡಿದ್ದ ಬಳಿಕ ಬಾಲಕಿ ಯಾರಿಗೂ ತಿಳಿಸದೆ ಸುಮ್ಮನಿದ್ದಳು ಎನ್ನಲಾಗಿದೆ ಬಳಿಕ ಬಾಲಕಿ ಗರ್ಭಿಣಿಯಾಗಿದ್ದು,ಆ.22 ರಂದು ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಆ.23ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಪರಾರಿಯಾಗಲು ಯತ್ನಿಸಿದ್ದು, ಬೆಂಗಳೂರಿನ ದೊಡ್ಡಬಳ್ಳಾಪುರದಿಂದ ತನ್ನ ಸ್ವಗ್ರಾಮವಾದ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಿಂದೂಪುರಕ್ಕೆ ಪರಾರಿಯಾಗಲು ಪ್ರಯತ್ನಿಸುತ್ತಿದ್ದ ಆ.25 ರಂದು ಸಂಜೆ ವೇಳೆ ಪೊಲೀಸರು ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಈತ ಆಂದ್ರಪ್ರದೇಶ ಮೂಲದವನಾಗಿದ್ದು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಧರ್ಮಸ್ಥಳದ ಯುವತಿಯನ್ನು ಪರಿಚಯ ಮಾಡಿಕೊಂಡು ಆಕೆಯೊಂದಿಗೆ ಸಂಬಂಧ ಬೆಳೆಸಿಕೊಂಡು ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿದೆ.
ಬಂಧಿತ ಆರೋಪಿಯನ್ನು ಆ.26ರಂದು ಮಂಗಳೂರಿನ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್. ನೇತೃತ್ವದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್. ಗಾಣಿಗೇರ ತಂಡದ ಸಿಬ್ಬಂದಿಗಳಾದ ವೃಷಭ, ಮಹೇಶ್ ಮತ್ತು ಚರಣ್‌ರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version