
ಬೆಳ್ತಂಗಡಿ: ಟೆಂಪೊ ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಕುಕ್ಕಳ ನಿವಾಸಿ ಸುನಿಲ್ (25) ಚಿಕಿತ್ಸೆ ಫಲಕಾರಿಯಾಗಿದೆ ಆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಆ.20 ರಂದು ರಾತ್ರಿ ಪುಂಜಾಲಕಟ್ಟೆ ಹೆದ್ದಾರಿಯಲ್ಲಿ ಮನೆಗೆ ನಡೆದುಕೊಂಡು ಹೋಗುತ್ತಿರುವಾಗ ಟೆಂಪೊ ಡಿಕ್ಕಿ ಹೊಡೆದಿದ್ದು ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತಲೆಯ ಭಾಗಕ್ಕೆ ಹಾಗೂ ಎದೆಗೆ ತೀವ್ರ ಏಟಾಗಿದ್ದ ಪರಿಣಾಮ 8 ದಿನ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸಿದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮೃತರು ತಾಯಿ, ಓರ್ವ ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.