Home ಅಪರಾಧ ಲೋಕ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ

ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ

0
2

ಬೆಳ್ತಂಗಡಿ; ಧರ್ಮಸ್ಥಳ ಉಜಿರೆ ಹೆದ್ದಾರಿಯಲ್ಲಿ ಮಣ್ಣ ಸಂಕದ ಸಮೀಪ ಕೆ.ಎಸ್ ಆರ್ ಟಿ ಸಿ ಬಸ್ ಹಾಗೂ ಕಾರಿನ ನಡುವೆ ಶುಕ್ರವಾರ ಮಧ್ಯಾಹ್ನ ಭೀಕರ‌ ಅಪಘಾತ ಸಂಭವಿಸಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಅಪಘಾತದ ವೇಳೆ ಕಾರಿನ ಹಿಂದಿನಿಂದ ಬರುತ್ತಿದ್ದ ಓಮ್ನಿ ಕಾರು ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೆ ಈಡಾದ ಕಾರಿನ‌ಹಿಂಬದಿಗೆ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಧರ್ಮಸ್ಥಳದ ನಿವಾಸಿ ಅನಂತರಾಮ್ (54) ಗಾಯಗೊಂಡಿರುವುದಾಗಿ ತಿಳಿದು ಬಂದಿದ್ದು

ಗಾಯಾಳುವನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆ ಗೆ ಕೊಂಡೊಯ್ಯಲಾಗಿದೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.

NO COMMENTS

LEAVE A REPLY

Please enter your comment!
Please enter your name here