Home ಅಪಘಾತ ಚಿಬಿದ್ರೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

ಚಿಬಿದ್ರೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

1
0

ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಭಾನುವಾರ ಬೆಳಗ್ಗೆ ಚಿಬಿದ್ರೆ ಬಳಿ ನಡೆದಿದೆ.

ಕೊಟ್ಟಿಗೆಹಾರ ಕಡೆಯಿಂದ ಉಜಿರೆ ಕಡೆಗೆ ಸಂಚರಿಸುತ್ತಿದ್ದ ಕಾರು ಚಿಬಿದ್ರೆ ಸಮೀಪಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ಹಾನಿಯಾಗಿದ್ದು, ಕಾರಿನಲ್ಲಿದ್ದವರು ಯಾವುದೇ ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಪರಿಣಾಮ ವಿದ್ಯುತ್ ಕಂಬ ಹಾನಿಗೊಂಡಿದ್ದರಿಂದ ಚಿಬಿದ್ರೆ ಸೇರಿದಂತೆ ಸುತ್ತಮುತ್ತಲ ಹಲವು ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಯಿತು.
ರಾಷ್ಟ್ರೀಯ ಹೆದ್ದಾರಿಯ ಅಲ್ಲಲ್ಲಿ ಈ ರೀತಿ ಅಪಘಾತಗಳು ಆಗಾಗ ಸಂಭವಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಕಳೆದ ವಾರ ಇದೇ ಪರಿಸರದ ಸುತ್ತ ವಾಹನವೊಂದು ವಿದ್ಯುತ್ ಕಂಬವನ್ನು ಮುರಿದು ಹಾಕಿ ಪರಾರಿಯಾದ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here