Home ಅಪರಾಧ ಲೋಕ ಬೆಳ್ತಂಗಡಿ : ಬಂದಾರು ನಿವಾಸಿ 9ನೇ ತರಗತಿ ಬಾಲಕ ನೇಣುಬಿಗಿದು ಆತ್ಮಹತ್ಯೆ

ಬೆಳ್ತಂಗಡಿ : ಬಂದಾರು ನಿವಾಸಿ 9ನೇ ತರಗತಿ ಬಾಲಕ ನೇಣುಬಿಗಿದು ಆತ್ಮಹತ್ಯೆ

0

ಬೆಳ್ತಂಗಡಿ : ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳ ನಿವಾಸಿ ಭರತ್‌ ಗೌಡ ಅವರ ಪುತ್ರ ಶ್ರವಣ್ ಬಿ.ಕೆ (14ವ) ಎಂಬಾತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆ.30ರಂದು ಬೆಳಗ್ಗೆ  ನಡೆದಿದೆ.

ಬಾಲಕ ಬೆಳ್ತಂಗಡಿ ನಗರದ ಹಳೆಕೋಟೆಯಲ್ಲಿರುವ ವಾಣಿ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಈತನಿಗೆ ಪರೀಕ್ಷೆಯಲ್ಲಿ ಅಂಕಗಳು ಕಡಿಮೆಯಾಗಿತ್ತು ಎನ್ನಲಾಗಿದ್ದು ಇದರ ಬೇಜಾರಿನಲ್ಲಿ ಇದ್ದ ಎನ್ನಲಾಗಿದೆ.  ಆ 29 ರಂದು ಸಂಜೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಬಾಲಕ
ಆ.30 ರಂದು ಮನೆಯ ಮೇಲ್ಚಾವಣಿಗೆ ವೇಲ್ ನಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಂದೆ-ತಾಯಿ ಮತ್ತು ಸಹೋದರಿ, ಬಂಧು ಬಳಗವನ್ನು ಅಗಲಿದ್ದಾರೆ.ಧರ್ಮಸ್ಥಳ ಪೋಲಿಸ್ ಠಾಣೆಯ ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version