Home ಸ್ಥಳೀಯ ಸಮಾಚಾರ ದ.ಕ ಜಿಲ್ಲಾ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರಿಂದ ರಕ್ಷಿತ್...

ದ.ಕ ಜಿಲ್ಲಾ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರಿಂದ ರಕ್ಷಿತ್ ಶಿವರಾಂ ಅವರಿಗೆ ಮನವಿ

0

ಬೆಳ್ತಂಗಡಿ;  ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರ ಕನಿಷ್ಠ ವೇತನ ತಡೆ ಹಿಡಿದಿರುವ ರಾಜ್ಯ ಸರ್ಕಾರದ ಆರ್ಥಿಕ ಇಲಾಖೆಯ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ ದ.ಕ ಜಿಲ್ಲಾ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ಮನವಿ ಸಲ್ಲಿಸಿದರು.

ಈ ಹಿಂದೆ ರಾಜ್ಯದ ಕಾರ್ಮಿಕ ಇಲಾಖೆಯು ಕಾರ್ಮಿಕರ ಕನಿಷ್ಠ ವೇತನ ಕಾಯ್ದೆ 1948 ರ ಕಾಯಿದೆಯಡಿ ಕನಿಷ್ಠ ವೇತನ ಜಾರಿಗೊಳಿಸಲು ಆದೇಶಿಸಲಾಗಿತ್ತು. ಆದರಂತೆ ಜೂನ್ , ಜುಲೈ ತಿಂಗಳ ವೇತನ ಕೂಡ ಪಾವತಿಯಾಗಿತ್ತು. ಆದರೆ ಇದೀಗ ಏಕಾಏಕಿ ರಾಜ್ಯದ ಆರ್ಥಿಕ ಇಲಾಖೆ ಕನಿಷ್ಠ ವೇತನ ಪರಿಷ್ಕರಣೆಯನ್ನು ತಡೆಹಿಡಿಯುವ ಮೂಲಕ ಹೊರಸಂಪನ್ಮಲ ನೌಕರರಿಗೆ ಅನ್ಯಾಯ ಎಸಗಲಾಗಿದೆ‌. ಈ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆದು , ತಡೆ ಹಿಡಿದಿರುವ ಕನಿಷ್ಠ ವೇತನವನ್ನು ಮರು ಜಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸೇರಿದಂತೆ ಸಂಬಂಧಪಟ್ಟ ಇಲಾಖೆಯ ಸಚಿವರೊಂದಿಗೆ ಮಾತುಕತೆ ನಡೆಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ಬರವಸೆ ನೀಡಿದರು.

ಈ ಸಂದರ್ಭದಲ್ಲಿ ದ.ಕ ಜಿಲ್ಲೆಯ ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಹೊರಸಂಪನ್ಮೂಲ ನೌಕರರು ಉಪಸ್ಥಿತರಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version