Home ಶಾಲಾ ಕಾಲೇಜು ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್.ಡಿ.ಎಂ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್.ಡಿ.ಎಂ ವಿದ್ಯಾರ್ಥಿ ಅಕ್ಷರ್ ಹಳೆಮನೆ ರಾಜ್ಯಮಟ್ಟಕ್ಕೆ ಆಯ್ಕೆ

0

ಉಜಿರೆ:ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ (SVYM) ಹಾಗೂ Qualcomm ವತಿಯಿಂದ ಆಯೋಜಿಸಲಾದ ‘ಅನ್ವೇಷಣೆ–2026’ ಸ್ಪರ್ಧೆಯಲ್ಲಿ ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ)ದ 10ನೇ ತರಗತಿ ವಿದ್ಯಾರ್ಥಿ ಅಕ್ಷರ್ ಹಳೆಮನೆ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಮೆರೆದಿದ್ದಾರೆ.

ಸ್ಪರ್ಧೆಯಲ್ಲಿ ಉತ್ತಮ ಸಾಧನೆ ತೋರಿದ ಅಕ್ಷರ್ ಹಳೆಮನೆ ಅವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಸಾಧನೆಯ ಮೂಲಕ ಶಾಲೆಗೆ ಹೆಮ್ಮೆ ತಂದಿರುವ ವಿದ್ಯಾರ್ಥಿಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ವಿದ್ಯಾಲಕ್ಷ್ಮಿ ನಾಯಕ್, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.

ವಿದ್ಯಾರ್ಥಿಯ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಶುಭಹಾರೈಸಿದ್ದು, ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಹಾರೈಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version