ಬೆಳ್ತಂಗಡಿ; ಪಣಕಜೆ ಮಸೀದಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಮೃತ ಯುವಕ ಉಜಿರೆ ನಿವಾಸಿ ರಿನ್ಸ್ ಶಿಬಿ (24) ಎಂಬಾತನಾಗಿದ್ದಾನೆ
ಮಂಗಳವಾರ ಸಂಜೆಯ ವೇಳೆ ಪಣಕಜೆಯಲ್ಲಿ ಟೆಂಪೋದ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದು ರಸ್ತೆಗೆ ಬಿದ್ದು ರಿನ್ಸ್ ಶಿಬಿ ಗಂಭೀರವಾಗಿ ಗಾಯಗೊಂಡಿದ್ದ ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ. ಘಟನೆಯ ಬಗ್ಗೆ ಪೂಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಿನ್ಸ್ ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದು ಯು ಕಾಂಗ್ರೆಸ್ ನಲ್ಲಿ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದ. ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರಯಲ್ಲಿ ರಾಹುಲ್ ಗಾಂಧಿ ರಿನ್ಸ್ ನ ಕೈ ಹಿಡಿದು ನಡೆಯುವ ಫೊಟೋ ವೈರಲ್‌ಆಗಿತ್ತು.
