ಬೆಳ್ತಂಗಡಿ; ಮಂಗಳೂರು : ಶಿಕ್ಷಕರ ದಿನಾಚರಣೆಯ ಹಿನ್ನಲೆಯಲ್ಲಿ ಕೊಡಮಾಡುವ ದ.ಕ.ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಪಟ್ಟಿಯನ್ನು ದ.ಕ.ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದು ಧರ್ಮಸ್ಥಳ ಗ್ರಾಮದ ಮುಂಡ್ರುಪ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಚಿತ್ರಪ್ರಭಾ ಅವರಿಗೆ ಉತ್ತಮಶಿಕ್ಷಕ ಪ್ರಶಸ್ತಿ ಲಭಿಸಿದೆ.
ಕಳೆದ ಹತ್ತು ವರ್ಷಗಳಿಂದ ಗ್ರಾಮೀಣ ಪ್ರದೇಶವಾದ ಮುಂಡ್ರುಪ್ಪಾಡಿ ಕಿರಿಯ ಪ್ರಾಧಮಿಕ ಶಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಇವರ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ಗುರುತಿಸಿ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ನೀಡಿದೆ.
ಕಿರಿಯ ಪ್ರಾಥಮಿಕ ಶಾಲಾ ವಿಭಾಗ, ಹಿರಿಯ ಪ್ರಾಥಮಿಕ ಶಾಲಾ ವಿಭಾಗ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ತಲಾ 7ರಂತೆ ಒಟ್ಟು 21 ಮಂದಿಗೆ ಪ್ರಶಸ್ತಿಯನ್ನು ಘೋಷಿಸಲಾಗಿದ್ದು ಸೆ.5ರಂದು ಪ್ರಶಸ್ತಿ ಪ್ರದಾನ ಕಾರ್ಯ ನಡೆಯಲಿದೆ.









