Home ಅಪರಾಧ ಲೋಕ ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ: ಮೂವರ ಬಂಧನ

ಮಂಗಳೂರು: ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ: ಮೂವರ ಬಂಧನ

0


ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಆರು ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಆರೋಪಿಗಳ ಪೈಕಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
2026ರ ಫೆಬ್ರವರಿಯಿಂದ ಆಗಸ್ಟ್‌ವರೆಗಿನ ಅವಧಿಯಲ್ಲಿ ಜವಾದ್, ಶಹೀದ್, ರಿಯಾಝ್ @ ಅಬ್ದುಲ್ ಗಫೂರ್ ಹಾಗೂ ಇತರ ಮೂವರು ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ, ಬಾಲಕ ಸೆಪ್ಟೆಂಬರ್ 4ರಂದು ವಿಟ್ಲ ಪೊಲೀಸರಿಗೆ ದೂರು ನೀಡಿದ್ದಾನೆ.

ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 185/2026ರಿಂದ 190/2026ರವರೆಗೆ ಆರು ಪ್ರಕರಣಗಳು ಪೋಕ್ಸೋ ಕಾಯ್ದೆಯಡಿ ದಾಖಲಾಗಿವೆ. ತನಿಖೆ ಕೈಗೊಂಡ ಪೊಲೀಸರು ಜವಾದ್, ಶಹೀದ್ ಹಾಗೂ ರಿಯಾಝ್ @ ಅಬ್ದುಲ್ ಗಫೂರ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.  ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಹುಡುಕಾಟ ಮುಂದುವರಿದಿದೆ.


NO COMMENTS

LEAVE A REPLY

Please enter your comment!
Please enter your name here

Exit mobile version