Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿ : ಕುವೆಟ್ಟು, ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ ಪರಿಶೀಲನೆ

ಬೆಳ್ತಂಗಡಿ : ಕುವೆಟ್ಟು, ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳ ಧಿಡೀರ್ ಭೇಟಿ ಪರಿಶೀಲನೆ

0

ಬೆಳ್ತಂಗಡಿ : ವಾಣಿಜ್ಯ ನಗರದ ಎರಡು ಗ್ರಾಮ ಪಂಚಾಯತ್ ಸೇರಿದ್ದಂತೆ ದಕ್ಷಿಣ ಜಿಲ್ಲೆಯ ಒಟ್ಟು ಏಳು ಗ್ರಾಮ ಪಂಚಾಯತ್ ಗೆ ಏಕ ಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ಧಿಡೀರ್ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸುತ್ತಿರುವ ಘಟನೆ ಸೆ. 8 ರಂದು ನಡೆದಿದೆ.

ಬೆಳ್ತಂಗಡಿ ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಲೋಕಾಯುಕ್ತ ಅಧಿಕಾರಿಗಳು ಬೆಳಗ್ಗೆ 10 ಗಂಟೆ ವೇಳೆಗೆ ಬಂದು ಕಚೇರಿಯಲ್ಲಿರುವ ಎಲ್ಲಾ ಕಡತಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಲೋಕಾಯುಕ್ತ ಕೇಂದ್ರ ಕಛೇರಿಗೆ ಸಾರ್ವಜನಿಕರಿಂದ ಭ್ರಷ್ಟಾಚಾರ ಕುರಿತು ದೂರುಗಳು ಬಂದ ಹಿನ್ನಲೆಯಲ್ಲಿ,ತನಿಖೆಯ ಮುಂದುವರಿದ ಭಾಗವಾಗಿ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಗ್ರಾಮ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ‌.

ಉಡುಪಿ ಜಿಲ್ಲೆಯ ಲೋಕಾಯುಕ್ತ ಇನ್ಸ್‌ಪೆಕ್ಟರ್ ಮಂಜುನಾಥ್ ಶಂಕರಹಳ್ಳಿ ನೇತೃತ್ವದಲ್ಲಿ ರಾಘವೇಂದ್ರ ಸಾಲಿಗ್ರಾಮ , ಆದರ್ಶ್, ಅರುಣ್ ಕುಮಾರ್, ಸೂರಜ್ ಕಾಪು ಸೇರಿ ಒಟ್ಟು ಏಂಟು ಮಂದಿಯ ತಂಡ ಭೇಟಿ ನೀಡಿ ಪರಿಶೀಲನೆ ಸಂಜೆ ತನಕ ಮುಂದುವರಿಯಲಿದೆ ಎಂದು ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಪೆರ್ಮುದೆ ಗ್ರಾಮ ಪಂಚಾಯತ್, ಬಂಟ್ವಾಳ ತಾಲೂಕಿನ ಪುದು, ಮಾಣಿ, ಗೊಳ್ತಮಜಲು, ಅಡ್ಯಾರ್ ಗ್ರಾಮ ಪಂಚಾಯತ್ ,ಬೆಳ್ತಂಗಡಿ ತಾಲೂಕಿನ ಕುವೆಟ್ಟು ಮತ್ತು ಮಡಂತ್ಯಾರ್ ಗ್ರಾಮ ಪಂಚಾಯತ್ ಸೇರಿ ಒಟ್ಟು ಏಳು ಗ್ರಾಮ ಪಂಚಾಯತ್ ಗಳಿಗೆ ಕಾರವಾರ, ಉಡುಪಿ, ಮಂಗಳೂರು ವಿಭಾಗದ ಲೋಕಾಯುಕ್ತ ಅಧಿಕಾರಿಗಳ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version