
ಉಪ್ಪಿನಂಗಡಿ; ಉಪ್ಪಿನಂಗಡಿ ಪೊಲೀಸ್ ಠಾಣೆಯ 2005ರ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕೌಕ್ರಾಡಿ ನಿವಾಸಿ ರಮೇಶ ಎಂಬ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಸೆ.10ರಂದು ನೆಲ್ಯಾಡಿಯಲ್ಲಿ ಬಂಧಿಸಿದ್ದಾರೆ.
ಉಪ್ಪಿನಂಗಡಿ ಠಾಣಾ ಸಿಬ್ಬಂದಿ ಹೆಚ್‌ಸಿ-508 ದಯಾನಂದ ಹಾಗೂ ಪಿಸಿ-453 ರವಿರಾಜ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.