Home ಬ್ರೇಕಿಂಗ್‌ ನ್ಯೂಸ್ ಬೆಳ್ತಂಗಡಿಯ ಉಷಾರಾಣಿ: ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕ

ಬೆಳ್ತಂಗಡಿಯ ಉಷಾರಾಣಿ: ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕ

2
0

ಬೆಳ್ತಂಗಡಿ: ಮೂಲತಃ ಬೆಳ್ತಂಗಡಿ ತಾಲ್ಲೂಕಿನವರಾದ ಉಷಾರಾಣಿ ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ.
ಈ ವರೆಗೆ ಮೈಸೂರಿನಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉಚ್ಛನ್ಯಾಯಾಲಯದ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.
ಅವರು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಹಿರಿಯ ವಿದ್ಯಾರ್ಥಿನಿಯಾಗಿದ್ದು, ಬೆಳ್ತಂಗಡಿಯಲ್ಲಿ ಹಿರಿಯ ವಕೀಲರು ಹಾಗೂ ಸಮಾಜಸೇವಾಕರ್ತರಾಗಿ ಚಿರಪರಿಚಿತರಾಗಿದ್ದ ದಿವಂಗತ ನೇಮಿರಾಜ ಶೆಟ್ಟಿ ಅವರ ಮಗಳು.

LEAVE A REPLY

Please enter your comment!
Please enter your name here