
ಬೆಳ್ತಂಗಡಿ; ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಕೆ.ಎಸ್. ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡ ಘಟನೆ ಸೆ 12 ರಂದು ಮಧ್ಯಾಹ್ನದ ವೇಳೆ ಸಂಭವಿಸಿದೆ.
ಧರ್ಮಸ್ಥಳ ದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯ ದಿಂದ ಧರ್ಮಸ್ಥಳ ಕ್ಕೆಬರುತ್ತಿದ್ದ ಬಸ್ ಎದುರು ಬದುರಾಗಿ ಡಿಕ್ಕಿಹೊಡೆದಿದ್ದು ಹೊಡೆತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದೆ. ಬಸ್ಸಿನ ಮುಂಭಾಗವೂ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರಿಗೂ ಗಾಯಗಳಾಗಿರುವುದಾಗಿ ತಿಳಿದು ಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಪೊಲೀಸರು ಸ್ಥಳಕ್ಕೆಆಗಮಿಸಿ ಪರಿಶೀಲನೆನಡೆಸಿದ್ದಾರೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.