
ಬೆಳ್ತಂಗಡಿ; ಮೊಗ್ರು ಗ್ರಾಮದ ಮುಗೇರಡ್ಕ ದಂಬೆತ್ತಿಮಾರು ಚಂದ್ರಹಾಸ ಅವರು ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮನೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದು. ಇಂದು ಅವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ ನೀಡಿ ಅರೋಗ್ಯ ವಿಚಾರಿಸಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ವತಿಯಿಂದ ವೀಲ್ ಚೇರ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪು. ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ಬಸ್ ಬಟ್ಲಡ್ಕ ಮಾಜಿ ಗ್ರಾಮ್ ಪಂಚಾಯತ್ ಉಪಾಧ್ಯಕ್ಷರಾದ . ಮಾಧವ ಪೂಜಾರಿ, ಉದ್ಯಮಿಗಳಾದ ಪ್ರಸಾದ್ ಕಡ್ತಿಲ, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.











