ಬೆಳ್ತಂಗಡಿ; ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದ ಭಾಗವಾಗಿ ಶಾಸಕರಾದ ಹರೀಶ್ ಪೂಂಜರವರು ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
