Home ಅಪರಾಧ ಲೋಕ ಪೋಕ್ಸೋ ಪ್ರಕರಣ ಗುರುವಾಯನಕೆರೆಯ ಅಬ್ದುಲ್ ಲತೀಫ್ ಗೆ  20 ವರ್ಷ ಕಠಿಣ ಶಿಕ್ಷೆ

ಪೋಕ್ಸೋ ಪ್ರಕರಣ ಗುರುವಾಯನಕೆರೆಯ ಅಬ್ದುಲ್ ಲತೀಫ್ ಗೆ  20 ವರ್ಷ ಕಠಿಣ ಶಿಕ್ಷೆ

0


ಬಂಟ್ವಾಳ: ಪೋಕ್ಸೋ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬೆಳ್ತಂಗಡಿ ಗುರುವಾಯನಕೆರೆ ನಿವಾಸಿ ಅಬ್ದುಲ್ ಲತಿಫ್‌ಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹80,000 ದಂಡ ವಿಧಿಸಿ ಮಂಗಳೂರಿನ FTSC-2 ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ.
ಬಂಟ್ವಾಳ ನಗರ ಪೊಲೀಸ್ ಠಾಣೆಯ ಅ.ಕ್ರ. 141/2025ರ ಪ್ರಕರಣದಲ್ಲಿ ತನಿಖೆ ನಡೆಸಿದ ಪೊಲೀಸ್ ನಿರೀಕ್ಷಕ ಅನಂತ ಪದ್ಮನಾಭ ಅವರು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಮಾನು ಕೆ.ಎಸ್. ಅವರು ಸೆ.19ರಂದು ಶಿಕ್ಷೆ ಪ್ರಕಟಿಸಿದರು.
ಸರ್ಕಾರಿ ಅಭಿಯೋಜಕಿ ಸಹನಾದೇವಿ ಬೋಳೂರು ಅವರು ಸರ್ಕಾರದ ಪರ ಸಮರ್ಥವಾಗಿ ವಾದ ಮಂಡಿಸಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version