ಬೆಳ್ತಂಗಡಿ : ಸರ್ವೋಚ್ಚ ನ್ಯಾಯಾಲಯ ಕು. ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಒಪ್ಪಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಈ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಪರವಾಗಿ ನಾವು ಮುಕ್ತಮನಸ್ಸಿನಿಂದ ಸ್ವಾಗತಿಸುತ್ತೇವೆ. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಹಲವು ವರ್ಷಗಳಿಂದ ಶ್ರೀ ಕ್ಷೇತ್ರದ ಮೇಲೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಹಾಗೂ ನಿರಂತರವಾಗಿ ಅಪಪ್ರಚಾರ ನಡೆಸಿ, ಕಳಂಕ ತರುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ.
ಕುಮಾರಿ ಸೌಜನ್ಯಾಳಿಗೆ ನ್ಯಾಯ ದೊರೆಯಬೇಕು ಎಂಬುದು ಶ್ರೀ ಕ್ಷೇತ್ರದ ದೃಢವಾದ ಆಶಯವಾಗಿದೆ.ಈಗ ಆದೇಶಿಸಲಾಗಿರುವ ಮರು ತನಿಖೆಯು ಸಂಪೂರ್ಣ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕವಾಗಿ ನಡೆಯಲಿ ಮತ್ತು ಈ ಮೂಲಕ ಪ್ರಕರಣಕ್ಕೆ ತಾರ್ಕಿಕ ಅಂತ್ಯ ದೊರೆಯಲಿ ಎಂದು ನಾವು ಆಶಿಸುತ್ತೇವೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಪರವಾಗಿ ದೇವಾಲಯ ಕಚೇರಿಯ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.









