ಬೆಳ್ತಂಗಡಿ: ಕಲಬುರ್ಗಿಯಲ್ಲಿ ಸೆ.21 ಹಾಗೂ 22 ರಂದು ನಡೆದ ರಾಜ್ಯ ಮಟ್ಟದ ಸೀನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮುಂಡಾಜೆ ನಿವಾಸಿ ತೇಜಲ್ ಕೆ.ಆರ್ 110 ಮೀ ಹರ್ಡಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆದು ರಾಜಾಸ್ತಾನದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ಪಡೆದುಕೊಂಡಿದ್ದಾರೆ.
ಮುಂಡಾಜೆ ನಿವಾಸಿ ರಾಜೇಶ್ ಕೆ.ವಿ ಹಾಗೂ ಜಿನ್ಸಿ ದಂಪತಿಯರ ಪುತ್ರ ತೇಜಲ್ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಪದವಿ ವಿದ್ಯಾರ್ಥಿ ಯಾಗಿದ್ದು ತರಬೇತುದಾರರಾದ ಶಾಂತರಾಮ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
