ಬೆಳ್ತಂಗಡಿ: ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ರಾಜ್ಯ ಸರಕಾರ ಎಸ್.ಐ.ಟಿ ಯನ್ನು ರಚಿಸಿದ್ದು ಪೊಲೀಸ್ ಮಹಾ ನಿರೀಕ್ಷಕರಾದ ಎನ್. ಶಶಿಕುಮಾರ್ ಐಪಿಎಸ್. ಅವರನ್ನು ಎಸ್. ಐ.ಟಿ ಮುಖ್ಯಸ್ಥ ರನ್ನಾಗಿ ನೇಮಿಸಲಾಗಿದೆ.
ಸದಸ್ಯರಾಗಿ ಮಂಗಳೂರು ಪೊಲೀಸ್ ಕಮಿಷನರ್ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ಐಪಿಎಸ್.
ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕರಾದ ನಿಶಾ ಜೇಮ್ಸ್ ಐಪಿಎಸ್, ಬೆಂಗಳೂರು ಸಿಐಡಿ ಪೊಲೀಸ್ ಅಧೀಕ್ಷಕರಾದ ಲೋಕೇಶ್ ಜಲಸಾಗರ್ ಐ.ಪಿ.ಎಸ್,
ಬೆಂಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ ಅವರನ್ನು ಎಸ್.ಐ.ಟಿ ತಂಡದ ಸದಸ್ಯರಾಗಿ ನೇಮಿಸಿ ಸರಕಾರ ಆದೇಶ ನೀಡಿದೆ.









