Home ಅಪರಾಧ ಲೋಕ ಮಾಡೂರು ಯುಸೂಫ್ ಹತ್ಯೆ ಪ್ರಕರಣ ಐವರು ಆರೋಪಿಗಳಿಗೆ‌ ಶಿಕ್ಷೆ‌ ವಿಧಿಸಿದ ನ್ಯಾಯಾಲಯ

ಮಾಡೂರು ಯುಸೂಫ್ ಹತ್ಯೆ ಪ್ರಕರಣ ಐವರು ಆರೋಪಿಗಳಿಗೆ‌ ಶಿಕ್ಷೆ‌ ವಿಧಿಸಿದ ನ್ಯಾಯಾಲಯ

0

ಮಂಗಳೂರು; 2015ರಲ್ಲಿ ಮಂಗಳೂರು ಕಾರಾಗೃಹದಲ್ಲಿ ನಡೆದ ಮಾಡೂರು ಯುಸೂಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.

2015ರ ನವೆಂಬರ್ 2ರಂದು ಮಂಗಳೂರು ನಗರದ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಕೇಂದ್ರ ಕಾರಾಗೃಹದಲ್ಲಿ ಮಾಡೂರು ಯುಸೂಫ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ಕುರಿತು ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್‌. ಅವರು ಅ.1ರಂದು ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಒಟ್ಟು 776 ಸಾವಿರ ದಂಡ ವಿಧಿಸಿ ತೀರ್ಪು ಪ್ರಕಟಿಸಿದರು.

ಪ್ರಕರಣದಲ್ಲಿ ಲಿತೇಶ್‌ ಪೂಜಾರಿ ಅಲಿಯಾಸ್ ಲಿತ್ತು, ಶೋಭರಾಜ್ ಅಲಿಯಾಸ್ ಶೋಭಿ, ಯುವರಾಜ್, ಪ್ರದೀಪ್ ಹಾಗೂ ಉಮೇಶ್ ಕೊಂಬಾರ್ ಅಲಿಯಾಸ್ ಉಮೇಶ್ ಕುಂಬಾರ ಅವರನ್ನು ದೋಷಿಗಳೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ಹಾಗೂ ₹76,000 ದಂಡ ವಿಧಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಸರ್ಕಾರಿ ಅಭಿಯೋಜಕ ಬಿ. ಮೋಹನ್ ಕುಮಾರ್ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು. ಅಂದಿನ ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಪೊಲೀಸ್‌ ಆಯುಕ್ತ ತಿಲಕ್ ಚಂದ್ರ ಅವರು ತನಿಖೆ ನಡೆಸಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಐವರು ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯ ಹಿನ್ನೆಲೆಯಲ್ಲಿ ನ್ಯಾಯಾಲಯ ಖುಲಾಸೆಗೊಳಿಸಿದೆ.

ಪ್ರಕರಣದ ಆರೋಪಿಗಳಾದ ಶರಣ್ ಪೂಜಾರಿ ಅಲಿಯಾಸ್ ರೋಹಿದಾಸ್‌ ಅಲಿಯಾಸ್ ಶರಣ್ ಆಕಾಶಭವನ್, ಮಹೇಶ್ ಕುಮಾ‌ರ್ ಅಲಿಯಾಸ್ ಮಹೇಶ್, ಕಮಲಾಕ್ಷ ಪೂಜಾರಿ, ಸತೀಶ್ ಆಚಾರ್ಯ ಹಾಗೂ ಲತೀಶ್ ಅಲಿಯಾಸ್ ಚಿತ್ತು ಅವರನ್ನು ನ್ಯಾಯಾಧೀಶರು ಖುಲಾಸೆಗೊಳಿಸಿದ್ದಾರೆ.

ಪ್ರಕರಣದಲ್ಲಿ ಆರೋಪಿಯಾಗಿರುವ ಭೂಗತ ಪಾತಕಿ ವಿಕ್ಕಿ ಶೆಟ್ಟಿ ಅಲಿಯಾಸ್ ಬಾಲಕೃಷ್ಣ ಶೆಟ್ಟಿ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧದ ವಿಚಾರಣೆಯನ್ನು ಬಾಕಿ ಇರಿಸಲಾಗಿದೆ.
2015ರ ನವೆಂಬರ್‌ನಲ್ಲಿ ಮಂಗಳೂರು ಕಾರಾಗೃಹದ ಬಿಗಿ ಭದ್ರತೆಯ ಆವರಣದಲ್ಲಿ ಮಾಡೂರು ಯೂಸುಫ್ ಮೇಲೆ ದಾಳಿ ನಡೆದಿತ್ತು. ಜೈಲು ಆವರಣದಲ್ಲೇ ಗಂಭೀರವಾಗಿ ಗಾಯಗೊಂಡಿದ್ದ ಯೂಸುಫ್ ಮೃತಪಟ್ಟಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version