Home ರಾಷ್ಟ್ರ/ರಾಜ್ಯ ರಾಜ್ಯದಲ್ಲಿ ಎರಡು ದಿನ ಭಾರೀಮಳೆಯ ಮುನ್ಸೂಚನೆ ದ.ಕ‌‌‌ ಸೇರಿದಂತೆ‌ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ರಾಜ್ಯದಲ್ಲಿ ಎರಡು ದಿನ ಭಾರೀಮಳೆಯ ಮುನ್ಸೂಚನೆ ದ.ಕ‌‌‌ ಸೇರಿದಂತೆ‌ ನಾಲ್ಕು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

5
0

ಬೆಂಗಳೂರು;  ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಸಕ್ರಿಯವಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ
ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಘಟ್ಟ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದ್ದು, ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ. ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಇಂದು ಕರಾವಳಿಯ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಗುಡ್ಡಗಾಡು ಪ್ರದೇಶಗಳಲ್ಲಿ ಸಿಡಿಲು ಉಂಟಾಗುವ ಸಾಧ್ಯತೆಯಿದ್ದು, ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಇನ್ನು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಜಾಗರೂಕರಾಗಿರಲು ಹವಾಮಾನ ಇಲಾಖೆ ಸೂಚಿಸಿದೆ. ಹವಾಮಾನದ ತೀವ್ರತೆ ಪರಿಗಣಿಸಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಈ ಜಿಲ್ಲೆಗಳಲ್ಲಿ ನಾಳೆಯೂ ಭಾರೀ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

LEAVE A REPLY

Please enter your comment!
Please enter your name here