Home ಅಪಘಾತ ಬೆಳ್ತಂಗಡಿಯ ವ್ಯಕ್ತಿ ಉಡುಪಿಯಲ್ಲಿ ರೈಲಿನಿಂದ ಬಿದ್ದು ಸಾವು

ಬೆಳ್ತಂಗಡಿಯ ವ್ಯಕ್ತಿ ಉಡುಪಿಯಲ್ಲಿ ರೈಲಿನಿಂದ ಬಿದ್ದು ಸಾವು

0

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಹೊರಗೆ ಬಿದ್ದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ನಡೆದಿದೆ.

ಮೃತರ ಬಳಿ ಪತ್ತೆಯಾದ ಮತದಾರರ ಗುರುತಿನ ಚೀಟಿಯಲ್ಲಿ ದಿನೇಶ್ ಎಂಬ ಹೆಸರು ಹಾಗೂ ಬೆಳ್ತಂಗಡಿ ತಾಲೂಕಿನ ಹೊಸಂಗಡಿ ನಿವಾಸಿ ಎಂಬ ವಿಳಾಸ ನಮೂದಾಗಿದೆ.

ದಿಲ್ಲಿ-ಎರ್ನಾಕುಳಂ ನಡುವೆ ಸಂಚರಿಸುವ ಟ್ರೈನ್‌ ಸಂಖ್ಯೆ 12284 ನಿಝಾಮುದ್ದೀನ್ ಎಕ್ಸ್ ಪ್ರೆಸ್ ಇಂದ್ರಾಳಿ ರೈಲು ನಿಲ್ದಾಣದ ಮೂಲಕ ನಿಧಾನಗತಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಎರಡನೇ ಬೋಗಿಯಲ್ಲಿದ್ದ ಪ್ರಯಾಣಿಕರೊಬ್ಬರು ರೈಲಿನಿಂದ ಹೊರಗೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ರೈಲ್ವೆ ಆರ್ಪಿಎಫ್ ಸಿಬ್ಬಂದಿಯು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಧಾವಿಸಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ತಕ್ಷಣ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.

ಮೃತರ ವಾರಸುದಾರರು ಮಣಿಪಾಲ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version