Home ಅಪರಾಧ ಲೋಕ ಪುತ್ತೂರು‌ ಅಕ್ರಮ ದನ ಸಾಗಾಟ ಪತ್ತೆ‌;ಮಾರಾಟ ಮಾಡಿದಆರೋಪ‌ ವ್ಯಕ್ತಿ‌ ಬಂಧನ 

ಪುತ್ತೂರು‌ ಅಕ್ರಮ ದನ ಸಾಗಾಟ ಪತ್ತೆ‌;ಮಾರಾಟ ಮಾಡಿದಆರೋಪ‌ ವ್ಯಕ್ತಿ‌ ಬಂಧನ 

0

ಪುತ್ತೂರು: ಕೇರಳದ ಕಡೆಗೆ
ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಪುತ್ತೂರು ಗ್ರಾಮಾಂತರ ಪೊಲೀಸರು ತಡೆದು, 11 ಜಾನುವಾರುಗಳನ್ನು ರಕ್ಷಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದಡಿ ಬಂಧಿಸಿದ್ದಾರೆ.

ಅ.5ರಂದು ಬೆಳಗಿನ ಜಾವ ಜಾನುವಾರುಗಳನ್ನು ಅಕ್ರಮವಾಗಿ ಕೇರಳದ ಕಡೆಗೆ ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಜಿ. ಭಂಡಾರಿ ಅವರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯೊಂದಿಗೆ ಪುತ್ತೂರು ಬಲ್ನಾಡು ಗ್ರಾಮದ ಬಿಳಿಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿ, KA-19-AF-8558 ನೋಂದಣಿಯ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಲಾಯಿತು. ಈ ವೇಳೆ ವಾಹನದ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಪರಾರಿಯಾಗಿದ್ದಾರೆ.
ವಾಹನವನ್ನು ಪರಿಶೀಲಿಸಿದಾಗ 11 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ. ಯಾವುದೇ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ 125/2026ರಂತೆ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020ರ ಕಲಂ 4, 6, 7, 12 ಹಾಗೂ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆಯ ಸೆಕ್ಷನ್ 11(d) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದಡಿ ಪುತ್ತೂರು ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ಬಂಧಿಸಿದ್ದಾರೆ. ಪರಾರಿಯಾಗಿರುವ ವಾಹನ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version