Home ಅಪರಾಧ ಲೋಕ  ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

 ಉದ್ಯೋಗ ಕೊಡಿಸುವುದಾಗಿ ಹಣ ಪಡೆದು ವಂಚಿಸಿ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

0

ಮಂಗಳೂರು: ವಿಟ್ಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 15 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ (52) ಬಂಧಿತ ಆರೋಪಿ. ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ಇಬ್ಬರನ್ನು ನಂಬಿಸಿ ಹಣ ಪಡೆದು, ಉದ್ಯೋಗ ಕೊಡಿಸದೇ ಹಾಗೂ ಹಣವನ್ನು ಹಿಂತಿರುಗಿಸದೇ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ.151/2011, ಕಲಂ 420, 465, 468, 471 ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು 05/10/2026ರಂದು ವಿಟ್ಲ ಠಾಣೆಯ ಸಿಬ್ಬಂದಿಗಳಾದ ಶಿವಾನಂದ ಮಡ್ಡಿ, ಶಿದ್ದಪ್ಪ ಹಾಗೂ ಯಂಕಪ್ಪ ಅವರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version