Home ಅಪಘಾತ ಧರ್ಮಸ್ಥಳ; ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

ಧರ್ಮಸ್ಥಳ; ಅಡಿಕೆ ಕೊಯ್ಯುವ ವೇಳೆ ವಿದ್ಯುತ್ ಶಾಕ್: ವ್ಯಕ್ತಿ ಸಾವು

4
0

ಬೆಳ್ತಂಗಡಿ: ಮನೆಯ ಬಳಿಯ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ತಂತಿಗೆ ದೋಟಿ ತಾಗಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್‌ಗೆ ಒಳಗಾಗಿ ಮೃತಪಟ್ಟ ಘಟನೆ ಧರ್ಮಸ್ಥಳದಲ್ಲಿ ನಡೆದಿದೆ.

ಧರ್ಮಸ್ಥಳ ಗ್ರಾಮದ ಅಜಿಕುರಿ ನಿವಾಸಿ ನಝಿರ್(35) ಎಂಬವರೇ ಮೃತವ್ಯಕ್ತಿಯಾಗಿದ್ದಾರೆ. ಅ 04 ಭಾನುವಾರ ಮನೆಯ ಸಮೀಪದ ಅಡಿಕೆ ಮರದಿಂದ ದೋಟಿ ಮೂಲಕ ಅಡಿಕೆ ಕೊಯ್ಯುತ್ತಿದ್ದ ವೇಳೆ, ಸಮೀಪದಲ್ಲೇ ಹಾದುಹೋಗಿದ್ದ ವಿದ್ಯುತ್ ತಂತಿಗೆ ಆಕಸ್ಮಿಕವಾಗಿ ದೋಟಿ ತಾಗಿದ ಪರಿಣಾಮ

ವಿದ್ಯುತ್ ಶಾಕ್‌ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಗುರುವಾರ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here