Home ಅಪಘಾತ ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ

ಚಾರ್ಮಾಡಿ ಘಾಟಿಯಲ್ಲಿ ಲಾರಿ ಪಲ್ಟಿ

2
0

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ ಎಂಟನೇ ತಿರುವಿನ ಬಳಿ ಕೊಟ್ಟಿಗೆಹಾರದಿಂದ ಉಜಿರೆ ಕಡೆಗೆ ಕುರಿಗೊಬ್ಬರ ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಗುರುವಾರ ಮುಂಜಾನೆ ನಡೆದಿದೆ.

ಘಟನೆಯಲ್ಲಿ ಲಾರಿ ರಸ್ತೆ ಬದಿಗೆ ಉರುಳಿ ಬಿದ್ದಿದ್ದು, ವಾಹನಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಲಾರಿಯಲ್ಲಿದ್ದ ಚಾಲಕ ಹಾಗೂ ನಿರ್ವಾಹಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಮುಂಜಾನೆ ಸಮಯದಲ್ಲಿ ಘಟನೆ ಸಂಭವಿಸಿದ್ದರಿಂದ ಲಾರಿಯ ಸಂಚಾರ ಕಡಿಮೆ ಇದ್ದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

ಲಾರಿ ರಸ್ತೆ ಬದಿಗೆ ಬಿದ್ದಿರುವುದರಿಂದ ಮುಖ್ಯ ರಸ್ತೆಯಲ್ಲಿ ಇತರ ವಾಹನಗಳ ಸಂಚಾರಕ್ಕೆ ಹೆಚ್ಚಿನ ಅಡ್ಡಿ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here